BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Street vendors meet ಸೆಪ್ಟೆಂಬರ್ 2 ಬೀದಿಬದಿ ವ್ಯಾಪಾರಸ್ಥರ ದ.ಕ ಜಿಲ್ಲಾ ಸಮಾವೇಶ


ಮಂಗಳೂರು, ಆಗಸ್ಟ್ 28: ಬೀದಿಬದಿ ವ್ಯಾಪಾರಸ್ಥರ ಮೇಲಿನ ಧಾಳಿ ದಬ್ಬಾಳಿಕೆ ವಿರೋಧಿಸಿ, ಬೀದಿ ಬದಿ ವ್ಯಾಪಾರಸ್ಥರ ಜೀವನ ಸಂರಕ್ಷಣೆ 2014ರ ಸಮಗ್ರ ಜಾರಿಗೆ ಒತ್ತಾಯಿಸಿ, ಜಿಲ್ಲೆಯಲ್ಲಿ ಸಂತೆ ಮತ್ತು ಜಾತ್ರೆ ವ್ಯಾಪಾರಿಗಳಿಗೆ ಸೂಕ್ತ ರಕ್ಷಣೆ ಒದಗಿಸಲು ಆಗ್ರಹಿಸಿ ತಾ/02/09/2026 ಬುಧವಾರ ಬೆಳಿಗ್ಗೆ 10ಕ್ಕೆ ನಗರದ ಡಾನ್ ಬಾಸ್ಕೊ ಹಾಲ್ ನಲ್ಲಿ ಬೀದಿಬದಿ ವ್ಯಾಪಾರಸ್ಥರ ದ.ಕ ಜಿಲ್ಲಾ ಸಮಾವೇಶ ನಡೆಯಲಿದೆ.

ಈ ಸಮಾವೇಶದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಬೀದಿಬದಿ, ಸಂತೆ, ಜಾತ್ರೆ ವ್ಯಾಪಾರಿಗಳ ಪ್ರತಿನಿಧಿಗಳು ಭಾಗವಹಿಸಿ ಜಿಲ್ಲೆಯ ಬೀದಿಬದಿ ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅವರ ಬೇಡಿಕೆಗಳನ್ನು  ಚರ್ಚಿಸಿ ಹೋರಾಟ ರೂಪಿಸುವ ಬಗ್ಗೆ ಚರ್ಚಿಸಲಿದ್ದಾರೆ.

ಈ ಸಮಾವೇಶದಲ್ಲಿ ಜಿಲ್ಲೆಯ ಬೀದಿಬದಿ ವ್ಯಾಪಾರಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್. ಎಸ್ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!