ಸುರತ್ಕಲ್, ಆಗಸ್ಟ್ 06 : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ರಿಕ್ಷಾ ಚಾಲಕ ಬೊಳ್ಳಾರು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತ ವಿದ್ಯಾರ್ಥಿಯಾಗಿದ್ದಾನೆ. ಶಾಲೆಯಲ್ಲಿ ಆಟದ ವೇಳೆ ಏಕಾಏಕಿ ಕುಸಿದು ಬಿದ್ದ ಲಿಖಿತ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಿಂದ ಶಾಲೆ ಹಾಗೂ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
Surathkal student heart attack ಸುರತ್ಕಲ್; ವಾಲಿಬಾಲ್ ಆಡುತ್ತಿದ್ದ ವೇಳೆ ಹೃದಯಾಘಾತ, ವಿದ್ಯಾರ್ಥಿ ಮೃತ್ಯು.!
ಸುದ್ದಿವಾಣಿ
8/06/2026 10:29:00 AM
ಸುರತ್ಕಲ್, ಆಗಸ್ಟ್ 06 : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ರಿಕ್ಷಾ ಚಾಲಕ ಬೊಳ್ಳಾರು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತ ವಿದ್ಯಾರ್ಥಿಯಾಗಿದ್ದಾನೆ. ಶಾಲೆಯಲ್ಲಿ ಆಟದ ವೇಳೆ ಏಕಾಏಕಿ ಕುಸಿದು ಬಿದ್ದ ಲಿಖಿತ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆಯಿಂದ ಶಾಲೆ ಹಾಗೂ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಟ್ಯಾಗ್ಗಳು:
ದಕ್ಷಿಣ ಕನ್ನಡ