BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Suspicious death of a Married Woman in Honnavar ಹೊನ್ನಾವರದಲ್ಲಿ ವಿವಾಹಿತೆ ಸಂಶಯಾಸ್ಪದ ಸಾವು – ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲು..!


ಹೊನ್ನಾವರ, ಆಗಸ್ಟ್ 27 : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ವಿವಾಹಿತೆಯೊಬ್ಬರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರ ಸಾವಿನ ಕುರಿತು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ದೊಡ್ಡಗುಂಡ ಗ್ರಾಮದ ಮಂಗಳಾ ಗಣಪತಿ ನಾಯ್ಕ (27) ಮೃತಪಟ್ಟ ದುರ್ದೈವಿ. ಮಂಗಳಾ ಅವರಿಗೆ ವಿವಾಹವಾಗಿ ಐದು ವರ್ಷಗಳಾಗಿದ್ದು, ಅವರ ಸಾವಿನ ಹಿಂದೆ ಯಾವುದೋ ಗುಮಾನಿ ಅಥವಾ ಕಾರಣವಿರಬಹುದು ಎಂದು ಮೃತಳ ಅಕ್ಕ, ದಾಂಡೇಲಿಯ ಲಲಿತಾ ಸಚಿನ್ ಗುಂಜಿಕರ್ ಅವರು ಮಂಕಿ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಕುಟುಂಬಸ್ಥರ ದೂರಿನ ಆಧಾರದ ಮೇಲೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು, ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಮೃತಳ ಮೃತದೇಹವನ್ನು ಹೆಚ್ಚಿನ ಪರೀಕ್ಷೆಗಾಗಿ ಕಾರವಾರ ಮೆಡಿಕಲ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಸಾವಿನ ರಹಸ್ಯ ಬಯಲಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!