BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

U T Khader ಮಂಗಳೂರು: ನಕಲಿ ಔಷಧಿ ಹಾಗೂ ಆಹಾರ ಕಲಬೆರಕೆ ತಡೆಗೆ ನಿವೃತ್ತ ಹಿರಿಯ ನಾಗರಿಕರ 'ವಾಚ್ ಟೀಮ್' ರಚನೆ - ಸಚಿವ ಯು.ಟಿ.ಖಾದರ್


ಮಂಗಳೂರು, ಆಗಸ್ಟ್ 22 :  ನಕಲಿ ಔಷಧಿ ಜಾಲ, ಆಹಾರ ಕಲಬೆರಕೆ ಹಾಗೂ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿವೃತ್ತ ಹಾಗೂ ಪರಿಣಿತ ಹಿರಿಯ ನಾಗರಿಕರನ್ನು ಒಳಗೊಂಡ ಕಾವಲು ಪಡೆ (ವಾಚ್ ಟೀಮ್) ರಚಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಮಂಗಳೂರು ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಈ ಜಾಲವನ್ನು ಮಟ್ಟಹಾಕಲು ಸಾರ್ವಜನಿಕರ ಸಹಕಾರ ಮತ್ತು ಜಾಗೃತಿ ಅತ್ಯಗತ್ಯ ಎಂದರು.

ಸುದ್ದಿಗೋಷ್ಠಿಯ ಪ್ರಮುಖ ಮುಖ್ಯಾಂಶಗಳು:

ನಕಲಿ ಔಷಧ ಜಾಲವೊಂದು ದೊಡ್ಡ ಮಾಫಿಯಾ: ನಕಲಿ ಔಷಧಿ ಜಾಲ ಗಂಭೀರ ಸ್ವರೂಪದ್ದಾಗಿದ್ದು, ಇದು ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಹಿಮಾಚಲ ಪ್ರದೇಶ ಹಾಗೂ ತೆಲಂಗಾಣದ ಅನಧಿಕೃತ ಕಂಪನಿಗಳಿಂದ ಇವು ಪೂರೈಕೆಯಾಗುತ್ತಿದ್ದು, ರಾಜ್ಯಾದ್ಯಂತ ಜನೌಷಧಿ ಕೇಂದ್ರಗಳು ಸೇರಿದಂತೆ ವಿವಿಧೆಡೆ ದಾಳಿ ಮುಂದುವರಿದಿದೆ.

ಆಹಾರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಫೈವ್ ಸ್ಟಾರ್ ಹೋಟೆಲ್‌ಗಳಿಂದ ಹಿಡಿದು ತಳಮಟ್ಟದ ಬೀದಿ ಬದಿ ಆಹಾರ ಮಳಿಗೆಗಳವರೆಗೆ ದಾಳಿ ಹಾಗೂ ಪರಿಶೀಲನೆ ನಡೆಸಲಾಗುತ್ತಿದೆ. ದಾಳಿಯ ಮುಖ್ಯ ಉದ್ದೇಶ ಯಾರಿಗೂ ಶಿಕ್ಷೆ ನೀಡುವುದಲ್ಲ, ಬದಲಿಗೆ ತಪ್ಪುಗಳನ್ನು ತಿದ್ದಿಕೊಳ್ಳಲು ಅವಕಾಶ ನೀಡುವುದು. ಸದ್ಯ ದಾಳಿ ನಡೆಸಿದ ಎಲ್ಲ ಕಡೆಗಳಲ್ಲೂ ನೋಟೀಸ್ ನೀಡಿ ಎಚ್ಚರಿಸಲಾಗಿದೆ.

ವಿಶೇಷ ತರಬೇತಿ ಮತ್ತು ಜಾಗೃತಿ: ಹೋಟೆಲ್ ಅಸೋಸಿಯೇಷನ್ ಹಾಗೂ ಬೀದಿ ಬದಿ ಆಹಾರ ಮಾರಾಟಗಾರರ ಸಭೆ ನಡೆಸಿ ಸ್ವಚ್ಛತೆಯ ಬಗ್ಗೆ ತರಬೇತಿ ನೀಡಲಾಗುವುದು. ಹೋಟೆಲ್‌ಗಳಲ್ಲಿ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡದೆ, ಅದನ್ನು ಬಯೋ ಡೀಸೆಲ್ ಆಗಿ ಪರಿವರ್ತಿಸುವ ಕುರಿತು ಜಾಗೃತಿ ಮೂಡಿಸಲಾಗುವುದು.

ಕೃತಕ ಪನ್ನೀರು ನಿಷೇಧ: ಕೃತಕ ಪನ್ನೀರು ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿಲ್ಲವಾದರೂ, ಮಹಾರಾಷ್ಟ್ರ ಮತ್ತು ರಾಜಸ್ಥಾನದಿಂದ ಪೂರೈಕೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೃತಕ ಪನ್ನೀರು ಬಳಕೆಯನ್ನು ಈಗಾಗಲೇ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

https://www.facebook.com/reel/1568471285074981

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!