BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

U T Khader ಹೋಟೆಲ್, ಪಿಜಿಗಳಲ್ಲಿ ಇನ್ಮುಂದೆ ಕ್ಯೂಆರ್ ಕೋಡ್ ವ್ಯವಸ್ಥೆ: ಸಾರ್ವಜನಿಕರ ದೂರಿಗೆ ತ್ವರಿತ ಸ್ಪಂದನೆ - ಆರೋಗ್ಯ ಸಚಿವ ಖಾದರ್


ಬೆಂಗಳೂರು, ಆಗಸ್ಟ್ 17 : ಸಾರ್ವಜನಿಕರು ಆಹಾರ ಸೇವಿಸುವ ಹೋಟೆಲ್‌ಗಳು, ಪಿಜಿಗಳು, ಮೆಡಿಕಲ್ ಸ್ಟೋರ್‌ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಇನ್ಮುಂದೆ ಕ್ಯೂಆರ್ ಕೋಡ್ (QR Code) ಅಳವಡಿಸಲು ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸುವ ನೂತನ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆಹಾರ ಇಲಾಖೆ ಕೈಗೊಂಡಿರುವ ಕಾರ್ಯಾಚರಣೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಈ ವಿನೂತನ ವ್ಯವಸ್ಥೆ ಅನುಷ್ಠಾನಗೊಳ್ಳುತ್ತಿದೆ ಎಂದು ಘೋಷಿಸಿದರು.

ಕ್ಯೂಆರ್ ಕೋಡ್ ಮೂಲಕ ನೇರ ದೂರು: ಸಾರ್ವಜನಿಕರು ಸ್ಥಳದಲ್ಲೇ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರದ ಗುಣಮಟ್ಟ, ಒದಗಿಸುತ್ತಿರುವ ಸೇವೆ ಅಥವಾ ಇತ್ಯಾದಿ ಸಮಸ್ಯೆಗಳ ಕುರಿತು ನೇರವಾಗಿ ದೂರು ಸಲ್ಲಿಸಬಹುದಾಗಿದೆ. ಈ ದೂರುಗಳು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಲುಪುವಂತೆ ಅತ್ಯಾಧುನಿಕ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಆಹಾರ ತಪಾಸಣೆ ತೀವ್ರ - ಕಠಿಣ ಎಚ್ಚರಿಕೆ: ಬೆಂಗಳೂರಿನ ಹೋಟೆಲ್‌ಗಳ ಮೇಲಿನ ದಾಳಿ ಮತ್ತು ದಿಢೀರ್ ತಪಾಸಣೆಗಳು ಮುಂದುವರಿಯಲಿವೆ. ಇದರ ಜೊತೆಗೆ ಖಾಸಗಿ ಹಾಸ್ಟೆಲ್‌ಗಳು, ಪಿಜಿಗಳು, ಬಸ್ ನಿಲ್ದಾಣಗಳು, ಮದುವೆ ಸಮಾರಂಭಗಳು, ರೈಲ್ವೆ ಕ್ಯಾಂಟೀನ್‌ಗಳು ಹಾಗೂ ವಿಮಾನಗಳಲ್ಲಿ ನೀಡಲಾಗುವ ಆಹಾರದ ಗುಣಮಟ್ಟವನ್ನೂ ಕಟ್ಟುನಿಟ್ಟಾಗಿ ಪರಿಶೀಲಿಸಲಾಗುವುದು ಎಂದು ಖಾದರ್ ಎಚ್ಚರಿಸಿದ್ದಾರೆ.

ವಿಶೇಷವಾಗಿ ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದು ಕಂಡುಬಂದಲ್ಲಿ ಯಾವುದೇ ಕಾರಣಕ್ಕೂ ಮುದಾಕ್ಷಿಣ್ಯ ತೋರಲಾಗುವುದಿಲ್ಲ. ಸಾರ್ವಜನಿಕರ ಆರೋಗ್ಯದೊಂದಿಗೆ ಚೆಲ್ಲಾಟವಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!