BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi ಮಾನಸಿಕ ಒತ್ತಡ, ಉಡುಪಿಯ ಉದಯೋನ್ಮುಖ ರೂಪದರ್ಶಿ ಕೃತಿ ಬಂಗೇರಾ (27) ಜೀವಾಂತ್ಯ..!


ಉಡುಪಿ, ಆಗಸ್ಟ್ 07 : ಮಾನಸಿಕ ಒತ್ತಡದ ಹಿನ್ನೆಲೆಯಲ್ಲಿ ಉಡುಪಿಯ ಉದಯೋನ್ಮುಕ ರೂಪದರ್ಶಿ ಕೃತಿ ಬಂಗೇರಾ (27) ಜೀವಾಂತ್ಯ ಮಾಡಿಕೊಂಡಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಈ ಘಟನೆ ನಡೆದಿದೆ. ಕೃತಿ ಬಂಗೇರಾ ಅವರು ನಗರದ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು  ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದರು. ಆದ್ರೆ ಕಳೆದ ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದಳು ಎನ್ನಲಾಗಿದೆ.

ತಾಯಿ ರತ್ನಾ ಗುರುವಾರ ಕೆಲಸದ ನಿಮಿತ್ತ ಮಲ್ಪೆಗೆ ತೆರಳಿದ್ದರು. ಅವರ ಎರಡನೇ ಪುತ್ರಿಯೂ ಕೆಲಸದ ಕಾರಣ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ಮನೆಗೆ ಹಿಂದಿರುಗಿದ ವೇಳೆ, ಕೃತಿ ತನ್ನ ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಳು. ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ, ಬೆಡ್‌ ರೂಮ್‌ನಲ್ಲಿ ಫ್ಯಾನ್‌ಗೆ  ಚೂಡಿದಾರ ವೇಲ್ ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕೃತಿ ಶವವಾಗಿ ಪತ್ತೆಯಾಗಿದ್ದಾಳೆ. ಕೃತಿ ಕಳೆದ ಹಲವಾರು ದಿನಗಳಿಂದ ಒತ್ತಡದಲ್ಲಿದ್ದಳು ಎನ್ನಲಾಗಿದ್ದು, ಇದೆ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!