BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi ಗಂಗೊಳ್ಳಿಯಲ್ಲಿ ಸಮುದ್ರದ ಅಲೆಗಳಿಗೆ ಸಿಕ್ಕಿ ಮತ್ತೊಂದು ಬೋಟು ಮುಳುಗಡೆ, ಬೋಟಿನಲ್ಲಿದ್ದ 27 ಮೀನುಗಾರರ ರಕ್ಷಣೆ...!


ಉಡುಪಿ, ಆಗಸ್ಟ್ 26 : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್ ಅಲೆಗಳ ಹೊಡೆತಕ್ಕೆ ಸಿಲುಕಿ ಬಿರುಕು ಬಿಟ್ಟು ಮುಳುಗಿದ ಘಟನೆ ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪ ನಡೆದಿದೆ. ಬೋಟು ಮುಳುಗಡೆಯಿಂದ ಲಕ್ಷಾಂತರ ರೂಪಾಯಿಗಳ ನಷ್ಟ ಸಂಭವಿಸಿದೆ. 

ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಘಟನೆ ನಡೆದಿದ್ದು, ಬೋಟ್‌ನಲ್ಲಿ 30 ಮಂದಿ ಮೀನುಗಾರರು ಇದ್ದರು. ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡ ಬೆನ್ನಲ್ಲೇ ನೀರು ಒಳನುಗ್ಗಿ ಮುಳುಗಲು ಆರಂಭಿಸಿತ್ತು.

ಗಂಗೊಳ್ಳಿ ಧಕ್ಕೆಯಿಂದ ಮಧ್ಯಾಹ್ನ ಬಳಿಕ ಮೀನುಗಾರಿಕೆಗೆ ತೆರಳಿದ ಭಟ್ಕಳ ಮುಂಡಳ್ಳಿ ಮೂಲದ ನಾಗರಾಜ ಮೊಗೇರ ಮಾಲಕತ್ವದ ಶ್ರೀ ಬಾಲಾಂಜನೇಯ ಹೆಸರಿನ ಪರ್ಶಿನ್ ಮೀನುಗಾರಿಕಾ ಬೋಟೊಂದು ಧಕ್ಕೆಯ ಅನತಿ ದೂರದಲ್ಲಿ ಅಳಿವೆಯ ಸಮೀಪವೇ ಮುಳುಗಡೆಯಾಗಿದೆ. ಕೂಡಲೇ ಕಾರ್ಯಚರಣೆಗೆ ಇಳಿದ ಸಮೀಪದಲ್ಲಿದ್ದ ಬೋಟುಗಳ ಮೀನುಗಾರರು ಹಾಗೂ ಕರಾವಳಿ ಕಾವಲು ಪಡೆಯ ಸಿಬಂದಿಗಳು ಬೋಟಿನಲ್ಲಿದ್ದ 27 ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ. ಬೋಟಿನ ತಳಭಾಗದ ಹಲಗೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಿರುವುದು ಬೋಟು ತ್ವರಿತವಾಗಿ ಮುಳುಗಲು ಕಾರಣವೆನ್ನಲಾಗಿದೆ.ಅವಘಡದಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದ್ದಾಗಿ ತಿಳಿದುಬಂದಿದೆ.

ಬೋಟಿನಲ್ಲಿದ್ದ ಮೀನುಗಾರರು ಅಪಾಯದ ಮುನ್ಸೂಚನೆ ಅರಿತು ಗಂಗೊಳ್ಳಿ ಬಂದರಿನಲ್ಲಿರುವ ಬೋಟ್‌ನವರಿಗೆ ಮಾಹಿತಿ ನೀಡಿದ್ದು, ಆ ಕೂಡಲೇ ಕಾರ್ಯಪ್ರವೃತರಾದ ಸ್ಥಳೀಯ ಮೀನುಗಾರರು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸರೊಂದಿಗೆ ಎರಡು ಬೋಟುಗಳಲ್ಲಿ ಸಮುದ್ರಕ್ಕೆ ತೆರಳಿ ಅಪಾಯದಲ್ಲಿದ್ದ ಎಲ್ಲಾ ಮೀನುಗಾರರನ್ನು ರಕ್ಷಿಸಿ ದ್ದಾರೆ. ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದ್ದು, ಬೋಟಿನಲ್ಲಿದ್ದ ಬಲೆ ಮತ್ತಿತರ ಸಲಕರಣೆಗಳು ಸಮುದ್ರ ಪಾಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲೆಗಳ ಅಬ್ಬರ ಹೆಚ್ಚಾಗಿರುವುದ ರಿಂದ ಮತ್ತು ಬೋಟು ನೀರಿನಲ್ಲಿ ಭಾಗಶ: ಮುಳುಗಿರುವುದರಿಂದ ಅಪಘಾತಕ್ಕೀಡಾದ ಬೋಟನ್ನು ಎಳೆ ತರಲು ಸಾಧ್ಯವಾಗಿಲ್ಲ ಎಂದು ತಿಳಿದುಬಂದಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!