BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi| ಉಡುಪಿ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ, ಬೈಕ್ ಒದಗಿಸಿದ್ದ 9ನೇ ಆರೋಪಿ ಬೈಂದೂರಿನಲ್ಲಿ ಬಂಧನ


ಉಡುಪಿ, ಆಗಸ್ಟ್ 22 : ಉಡುಪಿ ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೃತ್ಯಕ್ಕೆ ಬೈಕ್ ಒದಗಿಸಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಬೈಂದೂರು ಬಾಳಿಹಿತ್ಲು ನಿವಾಸಿ ಲೋಕೇಶ್ ತೇಜ ಕೊಠಾರಿ (42).  ಈತ ಹಿಂದೆ ಮುಂಬೈನಲ್ಲಿ ಕೆಲಸ ಮಾಡುತ್ತಿದ್ದಾಗ, ಪ್ರಕರಣದ ಮತ್ತೊಬ್ಬ ಆರೋಪಿ ಕಿಶೋರ್ ರಾಮ ಪೂಜಾರಿ ಪರಿಚಯವಾಗಿ ಸ್ನೇಹಿತನಾಗಿದ್ದನು. ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ಮೋಲ್ ರಸ್ತೋಗಿ ಹಾಗೂ ರಾಜುಗೆ ಈತ ಬೈಕ್ ಒದಗಿಸಿದ್ದನು. ಇತರ ಆರೋಪಿಗಳೊಂದಿಗೆ ಸೇರಿ ಕೊಲೆ ನಡೆಸಲು ಒಳಸಂಚು ರೂಪಿಸುವುದರಲ್ಲಿಯೂ ಈತ ಭಾಗಿಯಾಗಿದ್ದನು. ವಿಶೇಷ ಕರ್ತವ್ಯದಲ್ಲಿದ್ದ ಕಾರ್ಕಳ-ಪಡುಬಿದ್ರೆ ಪೊಲೀಸರು ಆರೋಪಿಯನ್ನು ಬೈಂದೂರಿನ ಯಡ್ತರೆ ಎಂಬಲ್ಲಿ ವಶಕ್ಕೆ ಪಡೆದು, ತನಿಖಾಧಿಕಾರಿಗಳ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್.  ಬೈಕಿನ ಇಂಜೀನ್ ನಂಬರ್ ಹಾಗೂ ಚಾಸೀಸ್ ನಂಬರ್ ಅನ್ನು ಉಜ್ಜಲು ಬಳಸಿದ ಮಿಷಿನ್. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!