BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi-born trainee pilot Abhishek Poojary dies in an airplane crash in Kanpur ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಉಡುಪಿ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ದಾರುಣ ಮೃತ್ಯು..!


ಉಡುಪಿ,ಆಗಸ್ಟ್ 28: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಖಾಸಗಿ ತರಬೇತಿ ವಿಮಾನ ಪತನ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಮೂಲದ ಟ್ರೈನಿ ಪೈಲೆಟ್ ಅಭಿಷೇಕ್ ಪೂಜಾರಿ ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆ ಮೂಲದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೃತ ಅಭಿಷೇಕ್ ಪೂಜಾರಿ ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು. ಇವರ ತಂದೆ ಪ್ರಭಾಕರ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ.

ಅಭಿಷೇಕ್ ಅವರು ಆಗಾಗ್ಗೆ ಕುಟುಂಬದೊಂದಿಗೆ ಉಡುಪಿ ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಗ್ರಾಮದ ಕಡೇಬೆರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಬಂದು ಹೋಗುತ್ತಿದ್ದರು. ಅಪಘಾತದ ಸುದ್ದಿ ತಿಳಿದ ಬಳಿಕ ಮೃತರ ಕುಟುಂಬಸ್ಥರು ಮುಂದಿನ ಕಾನೂನು ಪ್ರಕ್ರಿಯೆಗಳಿಗಾಗಿ ಕಾನ್ಪುರಕ್ಕೆ ತೆರಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಕಾನೂನು ಕ್ರಮಗಳು ಮುಂದುವರಿದಿವೆ ಎಂದು ಮಾಹಿತಿ ಲಭ್ಯವಾಗಿದೆ.

https://youtu.be/jruql3VpWpY

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!