BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi David Shootuot case ಉಡುಪಿ ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ ಮುಂಬೈನ ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ ಕಾಲಿಗೆ ಖಾಕಿ ಗುಂಡು..!


ಉಡುಪಿ, ಆಗಸ್ಟ್ 24: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್‌ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ನಟೋರಿಯಸ್ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್ (35) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
 ಆ.7ರಂದು ಮಧ್ಯಾಹ್ನ 3.45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್‌ ಕಾಂಪ್ಲೆಕ್ಸ್‌ನಲ್ಲಿ ಡೇವಿಡ್ ಡಿಸೋಜಾ ಅವರ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದಿದ್ದ ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿತ್ತು. 

ಪ್ರಕರಣದ ತನಿಖೆ ನಡೆಸುತ್ತಿದ್ದ ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜ ನಾಯಕ್, ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಹಾಗೂ ಸಿಬ್ಬಂದಿಯ ತಂಡವು ಸೋಮವಾರ ಬೆಳಗ್ಗೆ 6ರಿಂದ 6.30ರ ವೇಳೆಗೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ, ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶೂಟರ್‌ಗಳನ್ನು ಕಳುಹಿಸಿದ್ದಾನೆ ಎನ್ನಲಾದ ಅನುಜ್ ಪಾಟೀಲ್‌ನನ್ನು ಬಂಧಿಸಿದೆ. ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಕೊಲ್ಲೂರು ಠಾಣೆ ಪಿಎಸ್‌ಐ ವಿನಯ್ ಅವರ ಬಳಿಯಿದ್ದ ಆಯುಧವನ್ನು ಕಸಿದುಕೊಂಡು ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆತ್ಮರಕ್ಷಣೆಗಾಗಿ ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಂಜ ನಾಯಕ್ ಅವರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಅನುಜ್ ಪಾಟೀಲ್‌ನನ್ನು ಚಿಕಿತ್ಸೆಗಾಗಿ ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

 2017ರಿಂದ ತಲೆಮರೆಸಿಕೊಂಡಿದ್ದ ಆರೋಪಿ

 2017ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಅನುಜ್ ಪಾಟೀಲ್ ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಎನ್ನಲಾಗಿದ್ದು, 2017ರಿಂದ ತಲೆಮರೆಸಿಕೊಂಡಿದ್ದ. ಆತನ ವಿರುದ್ಧ ಮಹಾರಾಷ್ಟ್ರದಲ್ಲಿ MCOCA ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಒಟ್ಟು 11 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 10 ಪ್ರಕರಣಗಳು Arms Act ಅಡಿಯಲ್ಲಿ ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ನಾಲ್ಕು, ಗುಜರಾತ್‌ನಲ್ಲಿ ಐದು, ದಮನ್ ಮತ್ತು ದಿಯುನಲ್ಲಿ ಒಂದು ಹಾಗೂ ಕರ್ನಾಟಕದಲ್ಲಿ ಒಂದು ಪ್ರಕರಣ ದಾಖಲಾಗಿರುವುದಾಗಿ ಪೊಲೀಸ್ ಪ್ರಕಟಣೆ ತಿಳಿಸಿದೆ. ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಶೂಟರ್‌ಗಳಿಗೆ ನೆರವು ನೀಡಿದವರು 

https://youtube.com/shorts/hqUg5ETtztU?feature=share

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!