BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi Fisherman dies after falling from boat into the sea ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು..!


ಉಡುಪಿ, ಆಗಸ್ಟ್ 28 : ಮೀನುಗಾರಿಕೆ ಮುಗಿಸಿ ವಾಪಾಸು ಬರುತ್ತಿದ್ದ ದೋಣಿಯಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ರೊಬ್ಬರು ಮೃತಪಟ್ಟ ಘಟನೆ ಮರವಂತೆಯಲ್ಲಿ ಗುರುವಾರ  ನಡೆದಿದೆ.

ಮರವಂತೆ ಕುಪ್ಪನಮನೆ ನಿವಾಸಿ ಪರಮಜ್ಯೋತಿ(43) ಮೃತ ದುರ್ದೈವಿ. ಮರವಂತೆಯ ಪ್ರದೀಪ್ ಖಾರ್ವಿ ಎಂಬವರ ಧರ್ಮ ದೇವತೆ ದೋಣಿಯಲ್ಲಿ ಮೀನುಗಾರಿಕೆ ಕೆಲಸಕ್ಕೆ ಹೋಗಿದ್ದ ಪರಮಜ್ಯೋತಿ ಮರವಂತೆ ಬಂದರಿಗೆ ವಾಪಾಸ್ಸು ಬರುವಾಗ ಸಮುದ್ರದಲ್ಲಿ ಒಮ್ಮಲೇ ಜೋರಾಗಿ ಗಾಳಿ ಬೀಸಿತ್ತೆನ್ನಲಾಗಿದೆ. ಇದರ ಪರಿಣಾಮ ದೋಣಿಯು ನೀರಿನಲ್ಲಿ ತೇಲಾಡಿದ್ದು, ಇದರಿಂದ ಪರಮಜ್ಯೋತಿ ಆಯತಪ್ಪಿ ಸಮುದ್ರಕ್ಕೆ ಬಿದ್ದರು. ಅವರನ್ನು ಕೂಡಲೇ ಇತರರು ನೀರಿನಿಂದ ಮೇಲಕ್ಕೆ ಎತ್ತಿ ಚಿಕಿತ್ಸೆ ಬಗ್ಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದು ಕೊಂಡು ಹೋಗಿದ್ದು, ವೈದ್ಯರು ಪರೀಕ್ಷಿಸಿ ಪರಮಜ್ಯೋತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!