BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Udupi ಕಾಂಗ್ರೆಸ್ ಮುಖಂಡ ಡೇವಿಡ್ ಹತ್ಯಾ ಪ್ರಕರಣ ಮತ್ತಿಬ್ಬರು ಆರೋಪಿಗಳ ಬಂಧನ..!


ಉಡುಪಿ, ಆಗಸ್ಟ್ 12  : ಉಡುಪಿ ಜಿಲ್ಲೆಯ ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಹತ್ಯೆ ಪ್ರಕರಣ ಸಂಬಂಧಿಸಿ ಬಂಧಿತರ ಸಂಖ್ಯೆ 5 ಕ್ಕೇರಿದೆ. ಎರ್ಮಾಳ್ ತೆಂಕ ಪಂಚಾಯತ್ ಕಚೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳಾಗಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಇವರಿಬ್ಬರನ್ನು  ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಡೇವಿಡ್ ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!