BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Varamahalakshmi Pooja at Sri Kshetra Kudroli, thousands of mothers participated ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ, ಸಹಸ್ರಾರು ಮಾತೆಯರು ಭಾಗಿ



ಮಂಗಳೂರು,ಆಗಸ್ಟ್ 28: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶುಕ್ರವಾರ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ ಶ್ರದ್ಧಾಭಕ್ತಿ ಪೂರ್ವಕವಾಗಿ ನೆರವೇರಿತು.

ಕ್ಷೇತ್ರದಲ್ಲಿ ಬೆಳಗ್ಗೆ ಶ್ರೀ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಅಭಿಷೇಕ, ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದ ವೇದಿಕೆಯಲ್ಲಿ ಕಲಶ ಪ್ರತಿಷ್ಠಾಪನೆ, ಲಲಿತಾ ಸಹಸ್ರನಾಮ ಪಠಣ, ಭಜನೆ, ಶ್ರೀ ವರಮಹಾಲಕ್ಷ್ಮೀ ಪೂಜೆ, ಮಧ್ಯಾಹ್ನ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ ನೆರವೇರಿತು. ಸಹಸ್ರಾರು ಮಾತೆಯರು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡರು. ಮಾತೆಯರಿಗೆ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಬಾಗಿನ ನೀಡಲಾಯಿತು.ಸುಮಾರು 10 ಸಾವಿರ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.  

ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಸಂತೋಷ್ ಜೆ.ಪೂಜಾರಿ, ಸಾಯಿರಾಮ್ ಎಚ್.ಎಸ್.ಕಿಶೋರ್ ದಂಡೆಕೇರಿ, ಕೃತೀನ್ ಧೀರಜ್ ಅಮೀನ್, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ, ಸದಸ್ಯರಾದ ಪಿ.ಕೆ.ಗೌರವಿ ರಾಜಶೇಖರ್,  ಲತೀಶ್ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!