BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

WIM 'ಸ್ವಾತಂತ್ರ್ಯದಿಂದ ನಿರ್ಭಯತೆಯೆಡೆಗೆ': ರಾಜ್ಯಾದ್ಯಂತ ವಿಮೆನ್ ಇಂಡಿಯಾ ಮೂವ್‌ಮೆಂಟ್ ವತಿಯಿಂದ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ


ಮಂಗಳೂರು, ಆಗಸ್ಟ್ 17 : ಕರ್ನಾಟಕದಾದ್ಯಂತ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ 'ಸ್ವಾತಂತ್ರ್ಯದಿಂದ ನಿರ್ಭಯತೆಯೆಡೆಗೆ' ಎಂಬ ಘೋಷಣೆಯೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿವಿಧ ಜಿಲ್ಲೆಗಳ ಹಲವು ಕಡೆಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು.

ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮಗಳು, ಮಕ್ಕಳಿಗೆ ಆಟೋಟ ಸ್ಪರ್ಧೆ,  ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಸ್ವಾತಂತ್ರ್ಯದ ಮಹತ್ವವನ್ನು ಸಾರಲಾಯಿತು. ನಿಜವಾದ ಸ್ವಾತಂತ್ರ್ಯವೆಂದರೆ ಒಂದು ಬಂಧನದಿಂದ ಮುಕ್ತಿಯಲ್ಲ , ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಾತಂತ್ರ್ಯದ ನಿಜವಾದ ಸವಿಯನ್ನು ಸವಿಯುವಂತಾಗಬೇಕು. ಪೂರ್ವಜರು ಜಾತಿ, ಮತ, ಭೇದ ಮರೆತು ಹೋರಾಟವನ್ನು ನಡೆಸಿ ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಬೇಕಾಗಿದೆ. ಅದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಈ ಸಂದರ್ಭದಲ್ಲಿ ಮಹಿಳೆಯರು ಸ್ವತಂತ್ರವಾಗಿ, ಸುರಕ್ಷಿತವಾಗಿ, ಸಮಾನತೆಯಿಂದ ಹಾಗೂ ನಿರ್ಭಯವಾಗಿ ಬದುಕುವಂತಹ ಸಮಾಜ ನಿರ್ಮಾಣದ ಸಂಕಲ್ಪವನ್ನು ಮತ್ತೊಮ್ಮೆ ದೃಢಪಡಿಸಲಾಯಿತು.

ಕಾರ್ಯಕ್ರಮಗಳಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ನಾಯಕಿಯರು ಮತ್ತು ಪದಾಧಿಕಾರಿಗಳು ಸಕ್ರಿಯವಾಗಿ ಭಾಗವಹಿಸಿ, ಸ್ವಾತಂತ್ರ್ಯ, ಮಹಿಳಾ ಹಕ್ಕುಗಳು, ಸಮಾನತೆ ಹಾಗೂ ಮಹಿಳಾ ಸುರಕ್ಷತೆಯ ಕುರಿತು ತಮ್ಮ ಸಂದೇಶವನ್ನು ಹಂಚಿಕೊಂಡರು. ವಿವಿಧ ಜಿಲ್ಲೆಗಳಲ್ಲಿ ನಡೆದ ಕಾರ್ಯಕ್ರಮಗಳು ಮಹಿಳೆಯರಲ್ಲಿ ಸ್ವಾತಂತ್ರ್ಯ, ಆತ್ಮವಿಶ್ವಾಸ, ಹಕ್ಕುಗಳ ಅರಿವು ಹಾಗೂ ನಿರ್ಭಯತೆಯ ಸಂದೇಶವನ್ನು ಬಿತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದವು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!