BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Atten Mangaluru ಮಂಗಳೂರು ಜನ್ಮಾಷ್ಟಮಿ: ಸಂಚಾರ ದಟ್ಟಣೆ ನಿವಾರಣೆಗೆ ಪರ್ಯಾಯ ಮಾರ್ಗ ಪ್ರಕಟ


ಮಂಗಳೂರು, ಸೆಪ್ಟೆಂಬರ್ 04 : ಮಂಗಳೂರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಸೆ.5ರಂದು ಸಂಚಾರ ದಟ್ಟಣೆ ಉಂಟಾಗಲಿರುವ ಪ್ರಮುಖ ರಸ್ತೆಗಳು ಮತ್ತು ಸಾರ್ವಜನಿಕರಿಗಾಗಿ ಸೂಚಿಸಲಾದ ಪರ್ಯಾಯ ಮಾರ್ಗಗಳ ವಿವರವಾದ ಮಾಹಿತಿ ಇಲ್ಲಿದೆ:

1. ತೊಕ್ಕೊಟ್ಟು ಒಳಪೇಟೆ ಮೊಸರುಕುಡಿಕೆ

ದಟ್ಟಣೆ ಉಂಟಾಗುವ ರಸ್ತೆಗಳು: ರಾಷ್ಟ್ರೀಯ ಹೆದ್ದಾರಿ-66ರಲ್ಲಿ ತೊಕ್ಕೊಟ್ಟು ಜಂಕ್ಷನ್‌ನಿಂದ ಕೊಲ್ಯ ಜಂಕ್ಷನ್ ವರೆಗೆ ಹಾಗೂ ಉಳ್ಳಾಲ ಅಬ್ಬಕ್ಕ ವೃತ್ತ ಮತ್ತು ಒಳಪೇಟೆ ಕಡೆಗೆ ಸಂಚಾರ ದಟ್ಟಣೆ ಇರಲಿದೆ.

ಪರ್ಯಾಯ ಮಾರ್ಗಗಳು:

ತೊಕ್ಕೊಟ್ಟು ಜಂಕ್ಷನ್ ಮೂಲಕ ತಲಪಾಡಿ ಕಡೆಗೆ ತೆರಳುವ ವಾಹನಗಳು, ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಸರ್ವಿಸ್ ರಸ್ತೆಗೆ ಎಡಕ್ಕೆ ತಿರುಗಿ, ದೇರಳಕಟ್ಟೆ ಜಂಕ್ಷನ್‌ನಲ್ಲಿ ಬಲಕ್ಕೆ ತಿರುಗಿ ಮಡ್ಯಾರ್–ಮಾಡೂರು–ಬೀರಿಕೋಟೆಕಾರ್ ಜಂಕ್ಷನ್ ಮೂಲಕ ಸಂಚರಿಸಬಹುದು.

ತೊಕ್ಕೊಟ್ಟು ಜಂಕ್ಷನ್‌ನಿಂದ ಉಳ್ಳಾಲ ಅಬ್ಬಕ್ಕ ವೃತ್ತ ಹಾಗೂ ಒಳಪೇಟೆ ಕಡೆಗೆ ಹೋಗುವ ವಾಹನಗಳು ಬೀರಿಕೋಟೆಕಾರ್–ಸೋಮೇಶ್ವರ ಮಾರ್ಗವಾಗಿ ಸಂಚರಿಸಬೇಕು.


2. ಕದ್ರಿ ಶ್ರೀ ಗೋಪಾಲಕೃಷ್ಣ ಮಠ, ಕದ್ರಿ ಕಂಬಳ ಮೊಸರುಕುಡಿಕೆ

ದಟ್ಟಣೆ ಉಂಟಾಗುವ ರಸ್ತೆಗಳು: ಬಟ್ಟಗುಡ್ಡೆ ಜಂಕ್ಷನ್‌ನಿಂದ ಕದ್ರಿ ಕಂಬಳ ಹಾಗೂ ಭಾರತ್ ಬೀಡಿ ವರೆಗಿನ ರಸ್ತೆ.

ಪರ್ಯಾಯ ಮಾರ್ಗಗಳು:

ಬಟ್ಟಗುಡ್ಡೆ ಕಡೆಯಿಂದ ಕದ್ರಿ ಕಂಬಳ ಕಡೆಗೆ ಸಂಚರಿಸುವ ವಾಹನಗಳು ಬಿಜೈ ಜಂಕ್ಷನ್–ಪಿಂಟೋ ಬೇಕರಿ–ಕರಂಗಲಪಾಡಿ ಮಾರ್ಗವನ್ನು ಬಳಸಬಹುದು.

ಭಾರತ್ ಬೀಡಿ ಕಡೆಯಿಂದ ಬಟ್ಟಗುಡ್ಡೆ ಕಡೆಗೆ ತೆರಳುವ ವಾಹನಗಳು ಮಲ್ಲಿಕಟ್ಟೆ–ನಂತೂರು ಮಾರ್ಗವಾಗಿ ಸಾಗಬಹುದು.


3. ಶ್ರೀ ಅರಸು ಮುಂಡತ್ತಾಯ ಮೈದಾನ, ಅತ್ತಾವರ ಮೊಸರುಕುಡಿಕೆ

ದಟ್ಟಣೆ ಉಂಟಾಗುವ ರಸ್ತೆಗಳು: ಕೋಟಿಚೆನ್ನಯ ವೃತ್ತದಿಂದ ಬಾಬುಗುಡ್ಡೆ, ಅತ್ತಾವರ ಕೆ.ಎಂ.ಸಿ. ರಸ್ತೆ ಮೂಲಕ ಆನಂದ ಶೆಟ್ಟಿ ವೃತ್ತದವರೆಗೆ.

ಪರ್ಯಾಯ ಮಾರ್ಗಗಳು:

ಕೋಟಿಚೆನ್ನಯ ವೃತ್ತದ ಕಡೆಯಿಂದ ಅತ್ತಾವರ ಕಡೆಗೆ ಬರುವ ವಾಹನಗಳು ವೆಲೆನ್ಸಿಯಾ ಮಾರ್ಗವಾಗಿ ಸಂಚರಿಸಬಹುದು.

ಅತ್ತಾವರ ಕಡೆಯಿಂದ ಕೋಟಿಚೆನ್ನಯ ವೃತ್ತದ ಕಡೆಗೆ ಹೋಗುವ ವಾಹನಗಳು ಅತ್ತಾವರ ಆನಂದ ಶೆಟ್ಟಿ ವೃತ್ತದಲ್ಲಿ ಎಡಕ್ಕೆ ತಿರುಗಿ, ಎಸ್.ಎಲ್. ಮಥಾಯಸ್ ರಸ್ತೆ ಹಾಗೂ ಹೈಲ್ಯಾಂಡ್ ಜಂಕ್ಷನ್ ಮೂಲಕ ಸಾಗಬೇಕು.


4. ಶ್ರೀ ಕೃಷ್ಣ ಜ್ಞಾನೋದಯ ಭಜನಾ ಮಂದಿರ, ಕೊಟ್ಟಾರ ಮೊಸರುಕುಡಿಕೆ

ದಟ್ಟಣೆ ಉಂಟಾಗುವ ರಸ್ತೆಗಳು: ಕೊಟ್ಟಾರ ಚೌಕಿಯಿಂದ ಉರ್ವಸ್ಟೋರ್ ಜಂಕ್ಷನ್ ವರೆಗಿನ ರಸ್ತೆ.

ಪರ್ಯಾಯ ಮಾರ್ಗಗಳು:

ಲಾಲ್ ಬಾಗ್ ಅಥವಾ ನಾರಾಯಣಗುರು ವೃತ್ತದಿಂದ ಕೊಟ್ಟಾರ ಚೌಕಿ ಕಡೆಗೆ ಹೋಗುವ ವಾಹನಗಳು ಕೆ.ಎಸ್.ಆರ್.ಟಿ.ಸಿ.–ಕುಂಟಿಕಾನ ಮಾರ್ಗವಾಗಿ ಸಂಚರಿಸಬಹುದು.

ಕೊಟ್ಟಾರ ಚೌಕಿಯಿಂದ ಲಾಲ್ ಬಾಗ್ ಕಡೆಗೆ ತೆರಳುವ ಲಘು ವಾಹನಗಳು ಕುಂಟಿಕಾನ–ಬಿಜೈ–ಕೆ.ಎಸ್.ಆರ್.ಟಿ.ಸಿ. ಮಾರ್ಗವಾಗಿ ಹಾಗೂ ಘನ ವಾಹನಗಳು ಕುಂಟಿಕಾನ–ಕೆ.ಪಿ.ಟಿ. ವೃತ್ತ ಮಾರ್ಗವಾಗಿ ಸಂಚರಿಸಬೇಕು.

ಸಂಚಾರ ವ್ಯತ್ಯಯವನ್ನು ತಪ್ಪಿಸಲು ಸಾರ್ವಜನಿಕರು ಕಡ್ಡಾಯವಾಗಿ ಪರ್ಯಾಯ ಮಾರ್ಗಗಳನ್ನು ಬಳಸಿ. ಕಾರ್ಯಕ್ರಮದ ಸ್ಥಳಗಳಲ್ಲಿ ಹಾಗೂ ಮೆರವಣಿಗೆ ಸಾಗುವ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಬೇಡಿ ಮತ್ತು ಸಂಚಾರ ನಿಯಂತ್ರಣದ ವೇಳೆ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!