BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Belgavi ಬೆಳಗಾವಿ ಶಾರ್ಟ್‌ ಸರ್ಕಿಟ್‌ನಿಂದ ಮನೆ ಭಸ್ಮ, ಒಂದೇ ಕುಟುಂಬದ ನಾಲ್ವರು ಸಜೀವ ದಹನ..!



ಬೆಳಗಾವಿ,ಸೆಪ್ಟೆಂಬರ್ 15 :ಬೆಳಗಾವಿಯ ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯಲ್ಲಿ ಗಜಾನನ ರಾಜಾರಾಮ ದಮೋನೆ (65), ಶಾರದಾ ದಮೋನೆ (45), ಭಾರತಿ ರಾಜಾರಾಮ ದಮೋನೆ (50) ಹಾಗೂ ರೋಷನ ಗಜಾನನ ದಮೋನೆ (21) ಪ್ರಾಣ ಕಳೆದುಕೊಂಡ ದುರ್ದೈವಿಗಳಾಗಿದ್ದಾರೆ.

ಪ್ರಿಯಾ ಗಜಾನನ ದಮೋನೆ (28) ಹಾಗೂ ಗಂಗಾ ಗಜಾನನ ದಮೋನೆ (25) ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಕಾರಣವೇನು?

ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಮನೆಗೆ ಬೆಂಕಿ ವ್ಯಾಪಿಸಿಕೊಂಡಿದೆ ಎನ್ನಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಅತ್ಯಂತ ಸರಳವಾಗಿ ಜೀವನ ಸಾಗಿಸುತ್ತಿದ್ದ ಬಡ ಕುಟುಂಬವೇ ಈ ಅಗ್ನಿ ದುರಂತಕ್ಕೆ ಸಿಲುಕಿ ಕಣ್ಣೀರಿನಲ್ಲಿ ಮುಳುಗಿದೆ.

ಸಂದರ್ಭದಲ್ಲಿ ಎಲ್ಲೆಡೆ ಚೌತಿ ಹಬ್ಬದ ಸಂಭ್ರಮ ಮನೆಮಾಡಿತ್ತು. ಆದರೆ, ಅದೇ ಖುಷಿಯಲ್ಲಿದ್ದ ಕುಟುಂಬದಲ್ಲಿ ಈ ದುರಂತ ಸಂಭವಿಸಿರುವುದು ಇಡೀ ಸ್ಥಳೀಯರಲ್ಲಿ ತೀವ್ರ ಆಘಾತ ಹಾಗೂ ಶೋಕವನ್ನುಂಟು ಮಾಡಿದೆ.  ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರಿದಿದೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!