ಬೆಳ್ತಂಗಡಿ, ಸೆಪ್ಟೆಂಬರ್ 12 : ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಹಲವರು ಗಾಯಗೊಂಡಿದ್ದಾರೆ. ಸೆಪ್ಟೆಂಬರ್ 12ರ ಶನಿವಾರದಂದು ಈ ದುರ್ಘಟನೆ ನಡೆದಿದೆ.
ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮುಖಾಮುಖಿಯಾಗಿ ಭೀಕರವಾಗಿ ಢಿಕ್ಕಿ ಹೊಡೆದಿವೆ.ಅಪಘಾತದ ತೀವ್ರತೆ: ಢಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಹಾಗೂ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ.
ಅಪಘಾತದಲ್ಲಿ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಹಾಗೂ ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಗಾಯಗೊಂಡವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಿಂದಾಗಿ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.