BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Belthangady Leopard Captured ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಮತ್ತೊಂದು ಚಿರತೆ ಸೆರೆ..!


ಬೆಳ್ತಂಗಡಿ, ಸೆಪ್ಟೆಂಬರ್ 01 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ಚಿರತೆ ಹಾವಳಿ ಮುಂದುವರಿದಿದ್ದು, ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದೆ.

ಸವಣಾಲು ಗ್ರಾಮದ ಹನ್ಯಾಡಿ ಪಲ್ಕೆ ನಿವಾಸಿ ಬಾಲಕೃಷ್ಣ ನಾಯ್ಕ್ ಅವರ ಮನೆಯ ಅಂಗಳದಲ್ಲಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಬೋನು ಇರಿಸಿದ್ದರು. ಸ್ಥಳೀಯರ ಆತಂಕಕ್ಕೆ ಕಾರಣವಾಗಿದ್ದ ಈ ಚಿರತೆ ಕೊನೆಗೂ ಬೋನಿಗೆ ಬಿದ್ದು ಸೆರೆಯಾಗಿದೆ.

ಚಿರತೆ ಸೆರೆಯಾಗಿರುವ ಕುರಿತು ಮಾಹಿತಿ ನೀಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಸೆರೆಯಾದ ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಶೀಘ್ರದಲ್ಲೇ ನಡೆಸುವುದಾಗಿ ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!