BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Bengaluru Police ಪುಟ್ಟೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1.18 ಕೋಟಿ ರೂ. ಮೌಲ್ಯದ ಚಿನ್ನ-ಬೆಳ್ಳಿ ವಶ, 13 ಆರೋಪಿಗಳ ಬಂಧನ


ಬೆಂಗಳೂರು, ಸೆ 30 : ದಕ್ಷಿಣ ವಿಭಾಗದ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ 9 ಪ್ರತ್ಯೇಕ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಪೊಲೀಸರು, ಒಟ್ಟು 13 ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 731 ಗ್ರಾಂ ಚಿನ್ನಾಭರಣ, 859 ಗ್ರಾಂ ಬೆಳ್ಳಿಯ ವಸ್ತುಗಳು, ಹಾಗೂ 4.23 ಲಕ್ಷ ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಇದರ ಜೊತೆ ಕೃತ್ಯಕ್ಕೆ ಬಳಸಲಾದ 2 ಆಟೋರಿಕ್ಷಾಗಳನ್ನು ಜಪ್ತಿ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ಒಟ್ಟು ಸೊತ್ತಿನ ಮೌಲ್ಯ ಅಂದಾಜು 1.18 ಕೋಟಿ ರೂ. ಆಗಿದೆ.

ಈ ಕಾರ್ಯಾಚರಣೆಯ ಯಶಸ್ಸಿನಿಂದ ಪುಟ್ಟೇನಹಳ್ಳಿ ಮತ್ತು ಮೈಕೋ ಲೇಔಟ್ ಪೊಲೀಸ್ ಠಾಣೆಗಳ ಒಟ್ಟು 10 ಪ್ರಕರಣಗಳು ಪತ್ತೆಯಾಗಿವೆ. ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಜಯನಗರ ಉಪ ವಿಭಾಗದ ಎಸಿಪಿ, ಪುಟ್ಟೇನಹಳ್ಳಿ ಪಿಐ ಹಾಗೂ ಸಿಬ್ಬಂದಿಯವರ ತಂಡದ ಕಾರ್ಯವನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಪ್ರಶಂಸಿಸಿದ್ದಾರೆ.

ಎಂಆರ್‌ಪಿಎಲ್ ಘಟಕದಲ್ಲಿ ಭೀಕರ ಸ್ಫೋಟ: ಏಳು ಮಂದಿಗೆ ಗಾಯ, ಓರ್ವ ಗಂಭೀರ- ಜೋಕಟ್ಟೆಯಲ್ಲಿ ಮನೆಗಳು ಜಖಂ, ಜನ ಆಕ್ರೊಶ

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!