BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

DYFI Mangaluru ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನ :ನೂತನ ಜಿಲ್ಲಾ ಸಮಿತಿ ರಚನೆ


ಮಂಗಳೂರು, ಸೆ. 22 : 15ನೇ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು 20-09-2026 ರಂದು ನಗರದ ಬಲ್ಮಠ ಪ್ರದೇಶದ ಬಿಷಪ್ ಜತ್ತನ್ನ ಸಭಾಂಗಣದಲ್ಲಿ ನಡೆಯಿತು. ಡಾ. ಬಿ. ಆರ್. ಅಂಬೇಡ್ಕರ್ ವೃತ್ತ (ಜ್ಯೋತಿ) ದಿಂದ ಜತ್ತನ್ನ ಸಭಾಂಗಣದವರೆಗೆ  ಆಕರ್ಷಕ ರ್ಯಾಲಿ ನಡೆಸಿ, ಜಿಲ್ಲಾಧ್ಯಕ್ಷರಾದ ಬಿಕೆ ಇಮ್ತಿಯಾಝ್ ಧ್ವಜಾರೋಹಣ ನೆರವೇರಿಸಿ ಸಮ್ಮೇಳನಕ್ಕೆ ಚಾಲನೆ ನೀಡಿದರು .ದೆಹಲಿಯ ಜೆಎನ್ಯು ವಿಶ್ವವಿದ್ಯಾನಿಲಯದ ಮಾಜಿ ವಿದ್ಯಾರ್ಥಿನಿ, ರಾಷ್ಟ್ರೀಯ ಯುವನಾಯಕಿ ಕಾಮ್ರೆಡ್ ದಿಪ್ಸಿತಾ ಧರ್ (ಪಶ್ಚಿಮ ಬಂಗಾಳ )ಸಮ್ಮೇಳನವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ನಂತರ ಪ್ರತಿನಿಧಿ ಅಧಿವೇಶನ ಪ್ರಾರಂಭವಾಯಿತು. ಅಧಿವೇಶನದಲ್ಲಿ ಸುಮಾರು ನೂರೈವತ್ತು ಮಂದಿ ಪಾಲ್ಗೊಂಡು ಕಳೆದ ಮೂರು ವರ್ಷಗಳ ಸಂಘಟನೆಯ ಚಟುವಟಿಗೆಗಳ ಬಗ್ಗೆ ಚರ್ಚಿಸಲಾಯಿತು.

ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಯನ್ನು ಬಲಪಡಿಸಲು ಹಾಗೂ ಸರ್ಕಾರಿ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಯನ್ನು ನಿಯಂತ್ರಿಸಲು ಒತ್ತಾಯಿಸಿ ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ತಾಂತ್ರಿಕ ಹಾಗೂ ಕಾನೂನು ಕಾಲೇಜುಗಳನ್ನು ಸ್ಥಾಪಿಸಲು ಆಗ್ರಹಿಸಿ ,ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸರ್ಕಾರಿ ಬಸ್ ಓಡಾಟಕ್ಕೆ ಆಗ್ರಹಿಸಿ,ಪಡಿತರ ಚೀಟಿ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ,ದಕ್ಷಿಣ ಕನ್ನಡ ಜಿಲ್ಲೆಯಲಿರುವ ಸರ್ಕಾರಿ ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಲು ಆಗ್ರಹಿಸಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರಗಳ ಉದ್ದಿಮೆಗಳಲ್ಲಿ ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡುವಂತೆ ಒತ್ತಾಯಿಸಿ,ಮಾದಕ ವ್ಯಸನದ ವಿರುದ್ಧ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾನೂನು ಬಾಹಿರ ಟೋಲ್ ಕೇಂದ್ರ ಸ್ಥಾಪನೆ ವಿರೋಧಿಸಿ ಎಂಬ 7 ಪ್ರಮುಖ ನಿರ್ಣಾಯಗಳನ್ನು ಕೈಗೊಳ್ಳಲಾಯಿತು. ಸಮ್ಮೇಳನದಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಪ್ರತಿಜ್ಞೆ ಮಾಡಲಾಯಿತು.

ಸಮ್ಮೇಳನದಲ್ಲಿ ನೂತನ ಡಿವೈಎಫ್ಐ ಜಿಲ್ಲಾ ಸಮಿತಿಯನ್ನು ಆಯ್ಕೆ ಮಾಡಲಾಯಿತು.ಒಟ್ಟು 33 ಸದಸ್ಯರ ಜಿಲ್ಲಾ ಸಮಿತಿಯನ್ನು ರಚನೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಮನೋಜ್ ವಾಮಂಜೂರು , ಕಾರ್ಯದರ್ಶಿಯಾಗಿ ರಿಝ್ವಾನ್ ಹರೇಕಳ, ಕೋಶಾಧಿಕಾರಿಯಾಗಿ ಅಡ್ವೋಕೇಟ್ ಚರಣ್ ಶೆಟ್ಟಿ ಪಂಜಿಮೊಗರು ಆಯ್ಕೆಯಾದರು. ಉಪಾಧ್ಯಕ್ಷರುಗಳಾಗಿ ಅಡ್ವೋಕೇಟ್ ನಿತಿನ್ ಕುತ್ತಾರ್,ಸುನೀಲ್ ತೇವುಲ,ತೈಯ್ಯೂಬ್ ಬೆಂಗ್ರೆ, ಜೊತೆ ಕಾರ್ಯದರ್ಶಿಗಳಗಿ ಮಿಥುನ್ ರಾಜ್ ಕುತ್ತಾರ್,ರಝಾಕ್ ಮುಡಿಪು,ಮಾಧುರಿ ಬೋಳಾರ,ವಿನುಷ ರಮಣ ಬೆಳ್ತಂಗಡಿ ಆಯ್ಕೆಯಾದರು.

ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಅಭಿಷೇಕ್ ಬೆಳ್ತಂಗಡಿ, ಕ್ರೀಡಾ ಕಾರ್ಯದರ್ಶಿಯಾಗಿ ಜಗದೀಶ್ ಬಜಾಲ್ ರವರು ಆಯ್ಕೆಯಾದರು.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!