BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Karkal ಕಾರ್ಕಳ : ಶಾಸಕ ವಿ. ಸುನಿಲ್ ಕುಮಾರ್ ಹೆಡ್‌ಲೈನ್ ಎಡಿಟ್ ಮಾಡಿ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟ ಆರೋಪಿ ವಶಕ್ಕೆ


ಕಾರ್ಕಳ,ಸೆಪ್ಟೆಂಬರ್ 13: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರ ತಲೆ ಕತ್ತರಿಸಿದ ರೀತಿಯಲ್ಲಿ ಚಿತ್ರವನ್ನು ಎಡಿಟ್ ಮಾಡಿ, ಪ್ರಚೋದನಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಡಿ ಪ್ರಸಾದ್ ಶೆಟ್ಟಿ ಎಂಬಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾರ್ಕಳದ ವಿಫೇಶ್ ಪ್ರಸಾದ್ ರಾವ್ ಅವರು ಸೆಪ್ಟೆಂಬರ್ 12ರ ರಾತ್ರಿ ಫೇಸ್‌ಬುಕ್ ವೀಕ್ಷಿಸುತ್ತಿದ್ದ ವೇಳೆ 'Prasad Shetty' ಎಂಬ ಖಾತೆಯಲ್ಲಿ ಶಾಸಕರ ಚಿತ್ರವನ್ನು ವಿರೂಪಗೊಳಿಸಿ, ಅವಾಚ್ಯ ಶಬ್ದಗಳು ಹಾಗೂ ಪ್ರಚೋದನಕಾರಿ ಹಿನ್ನೆಲೆ ಧ್ವನಿಯೊಂದಿಗೆ ವಿಡಿಯೋ ಪ್ರಕಟಿಸಿರುವುದು ಗಮನಕ್ಕೆ ಬಂದಿದ್ದು, ಈ ಕುರಿತು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಜನರಿಂದ ಆಯ್ಕೆಯಾದ ಶಾಸಕರನ್ನು ಕೊಲೆ ಮಾಡಬೇಕು, ಹೊಡೆಯಬೇಕು ಎಂಬ ರೀತಿಯಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವ ಉದ್ದೇಶದಿಂದ ಈ ವಿಡಿಯೋ ಸೃಷ್ಟಿಸಲಾಗಿದೆ. ಇದರಿಂದ ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಚೆತ್ತ ಪೊಲೀಸರು, ಆರೋಪಿ ಪ್ರಸಾದ್‌ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!