BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Karkala 42 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರವೀಂದ್ರ ಶೆಟ್ಟಿ ಮಹಾರಾಷ್ಟ್ರದಲ್ಲಿ ಪೊಲೀಸ್ ಬಲೆಗೆ..!


ಕಾರ್ಕಳ,ಸೆಪ್ಟೆಂಬರ್ 03: ಸುಮಾರು 42 ವರ್ಷಗಳಿಂದ ತಲೆಮರೆಸಿಕೊಂಡಿದ್ದಾನೆ ಎನ್ನಲಾದ ಪಳ್ಳಿ ಗ್ರಾಮದ ನಿವಾಸಿ ರವೀಂದ್ರ ಶೆಟ್ಟಿ (65) ಎಂಬಾತನನ್ನು ಕಾರ್ಕಳ ನಗರ ಪೊಲೀಸರು ಮಹಾರಾಷ್ಟ್ರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.

ಕಾರ್ಕಳ ನಗರ ಪೊಲೀಸರು ನಡೆಸಿದ ನಿರಂತರ ಕಾರ್ಯಾಚರಣೆಯ ಬಳಿಕ ಸೆಪ್ಟೆಂಬರ್ 1ರಂದು ಮಹಾರಾಷ್ಟ್ರದ ಮುಲುಂಡ್ ಪಶ್ಚಿಮದಲ್ಲಿ ರವೀಂದ್ರ ಶೆಟ್ಟಿಯನ್ನು ಬಂಧಿಸಲಾಯಿತು. ನಂತರ ಸೆಪ್ಟೆಂಬರ್ 2ರಂದು ಆತನನ್ನು ಕಾರ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!