BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Karnataka CM at Mangaluru ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಸಂಭ್ರಮ: ಐರಾವತ ಹಾಗೂ ಡಬಲ್ ಡೆಕ್ಕರ್ ಬಸ್‌ನಲ್ಲಿ ಸಿಎಂ, ಸಚಿವರ ಸಂಚಾರ


ಮಂಗಳೂರು, ಸೆ.18: ನಗರದ ಪ್ರಜಾಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರಿಗೆ ಕರಾವಳಿಯ ಸಾಂಪ್ರದಾಯಿಕ ಪೂರ್ಣಕುಂಭ ಸ್ವಾಗತ ನೀಡಿ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು.

ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿಗಳು ಹಾಗೂ ಸಚಿವರು ಐತಿಹಾಸಿಕ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 



ನಂತರ ಐರಾವತ ಬಸ್‌ನಲ್ಲಿ ಕದ್ರಿ ಯುದ್ಧ ಸ್ಮಾರಕಕ್ಕೆ ತೆರಳಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಅಲ್ಲಿಂದ ಪಂಪ್‌ವೆಲ್‌ಗೆ ಆಗಮಿಸಿದ ಮುಖ್ಯಮಂತ್ರಿ ಮತ್ತು ಸಚಿವರನ್ನು ತೆರೆದ ಡಬಲ್ ಡೆಕ್ಕರ್ ಬಸ್‌ನಲ್ಲಿ ಪಂಪ್‌ವೆಲ್‌ನಿಂದ ಪಡೀಲ್‌ನ ಪ್ರಜಾಸೌಧದವರೆಗೆ ಅದ್ಧೂರಿ ಮೆರವಣಿಗೆಯ ಮೂಲಕ ಕರೆತರಲಾಯಿತು. ಮೆರವಣಿಗೆಯ ಮಾರ್ಗದುದ್ದಕ್ಕೂ ಸಾರ್ವಜನಿಕರು ಹರ್ಷೋದ್ಘಾರದಿಂದ ಸ್ವಾಗತ ಕೋರಿದರು.

ಪ್ರಜಾಸೌಧದ ಪ್ರವೇಶ ದ್ವಾರದ ಬಳಿ ಕಲ್ಲಡ್ಕದ ಸಾಂಪ್ರದಾಯಿಕ ಗೊಂಬೆ ಪ್ರದರ್ಶನ ಹಾಗೂ ಪೂರ್ಣಕುಂಭದೊಂದಿಗೆ ಆತಿಥ್ಯ ನೀಡಿ ಗಣ್ಯರನ್ನು ಸ್ವಾಗತಿಸಲಾಯಿತು. ಪ್ರಜಾಸೌಧದ ಆವರಣ ಪ್ರವೇಶಿಸಿದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವರೊಂದಿಗೆ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಮಹತ್ವದ ಸಂದೇಶ ಸಾರಿದರು. ಬಳಿಕ ಪ್ರಜಾಸೌಧದ ಎದುರಿನ ಧ್ವಜಸ್ತಂಭದ ಬಳಿ ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟ ಸದಸ್ಯರು ಗುಂಪು ಛಾಯಾಚಿತ್ರಕ್ಕೆ ಪೋಸ್ ನೀಡಿ ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯಗೊಳಿಸಿದರು.











📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!