BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
[ಹೋಮ್] ತಿಂಗಳ ಪಾಪ್ಯುಲರ್ ಸುದ್ದಿಗಳು
ದಕ್ಷಿಣ ಕನ್ನಡ

Karnataka Highcourt ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌: ಸೌಹಾರ್ದತೆ ಕದಡುವುದರಿಂದ ಯಾವುದೇ ಪ್ರಗತಿ ಸಾಧ್ಯವಿಲ್ಲ - ಹೈಕೋರ್ಟ್ ಅಭಿಮತ - ಹೈಕೋರ್ಟ್ ಅಭಿಮತ


ಬೆಂಗಳೂರು, ಸೆಪ್ಟೆಂಬರ್ 03: ಸೌಹಾರ್ದತೆ ಕದಡುವ ಮತ್ತು ಸಾಮಾಜಿಕ ಅಶಾಂತಿ ಮೂಡಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕುವುದರಿಂದ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.

ರಸ್ತೆಯಲ್ಲಿ ನಮಾಜ್‌ ಮಾಡಿದ ಪ್ರಕರಣದಲ್ಲಿ ಪೊಲೀಸರು 24 ಗಂಟೆಯಲ್ಲೇ 'ಬಿ' ರಿಪೋರ್ಟ್ ಹಾಕಿದ್ದನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದ ಹಿಂದೂ ಸಂಘಟನೆಯ ಮುಖಂಡ ಶರಣ್‌ ಪಂಪ್‌ವೆಲ್‌ ವಿರುದ್ಧ ಮಂಗಳೂರು ಸಿಇಎನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿದ  ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆಯ ಮುಖ್ಯಾಂಶಗಳು:

 ಪೋಸ್ಟ್‌ನಲ್ಲಿ ಯಾವುದೇ ಅಪರಾಧದ ಅಂಶಗಳಿಲ್ಲ, ಪೊಲೀಸರು ಅನಗತ್ಯವಾಗಿ ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ ಎಂದು ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದರು.

 ಇಂತಹ ಪೋಸ್ಟ್‌ಗಳು ಕೋಮು ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುತ್ತವೆ ಎಂದು ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಕಳವಳ ವ್ಯಕ್ತಪಡಿಸಿದರು.

"ಸೌಹಾರ್ದತೆಯಿಂದ ಬದುಕುವುದೇ ಅತ್ಯುತ್ತಮ ವಿಧಾನ. ಇವರ ಮೇಲೆ-ಅವರ ಮೇಲೆ ಏಕೆ ಕಾಮೆಂಟ್‌ ಮಾಡಬೇಕು?" ಎಂದು ಪೀಠವು ಬೇಸರ ವ್ಯಕ್ತಪಡಿಸಿತು.

ಉಭಯ ಪಕ್ಷಕಾರರ ವಾದ ಆಲಿಸಿದ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿದ್ದು, ತೀರ್ಪು ಬರುವವರೆಗೆ ಅರ್ಜಿದಾರರ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಮುಂದುವರಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!