BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Karnataka Rail Alert ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಕರಾವಳಿ ಸೇರಿ ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ..!


ಬೆಂಗಳೂರು,ಸೆ 20: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ನಿರಂತರವಾಗಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೆಪ್ಟೆಂಬರ್ 25ರ ವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಪ್ರಮುಖವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಈಗಾಗಲೇ ಸಂಬಂಧಿತ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!