ಕೊಪ್ಪಳ, ಸೆ 29: ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಬಸ್ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿನಿಯೊಬ್ಬಳು ದಿಟ್ಟ ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.
ಹ್ಯಾಟಿ–ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ ಬಸ್ ಅನ್ನು ಬಿ.ಹೊಸಹಳ್ಳಿ ಗ್ರಾಮದ ಬಳಿ ವಿದ್ಯಾರ್ಥಿಗಳು ತಡೆದಿದ್ದಾರೆ. ಶಾಲೆಯಲ್ಲಿ ಪರೀಕ್ಷೆಗಳು ನಡೆಯುತ್ತಿದ್ದರೂ, ಬಸ್ ನಿಲ್ಲಿಸದೆ ತೆರಳಲು ಮುಂದಾದ ಸಿಬ್ಬಂದಿಯ್ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಬಸ್‌ನ ಮುಂಭಾಗದಲ್ಲಿ ಧೈರ್ಯವಾಗಿ ನಿಂತು, "ಶಾಲೆಗೆ ಪರೀಕ್ಷೆ ನಡೆಯುತ್ತಿದೆ. ಬಸ್ ನಿಲ್ಲಿಸದೆ ಹೋದರೆ ನಾವು ಶಾಲೆಗೆ ಹೇಗೆ ಹೋಗಬೇಕು? ನಮ್ಮ ಶೈಕ್ಷಣಿಕ ಜೀವನವನ್ನು ಹಾಳು ಮಾಡುತ್ತೀರಾ?" ಎಂದು ಬಸ್ ಚಾಲಕ ಹಾಗೂ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳಿಗಾಗಿ ಕಡ್ಡಾಯವಾಗಿ ಬಸ್ ನಿಲ್ಲಿಸಿ, ಶಾಲೆಗೆ ತೆರಳಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.
ಸದ್ಯ ವಿದ್ಯಾರ್ಥಿನಿಯ ಈ ದಿಟ್ಟ ಪ್ರತಿಭಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
https://www.facebook.com/reel/1824890578962181