BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

KSRTC Bus caught Fire in kukke subramanya ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ: ಸುಬ್ರಹ್ಮಣ್ಯದಲ್ಲಿ ಬೆಂಕಿಗಾಹುತಿಯಾದ KSRTC ಬಸ್, 37 ಪ್ರಯಾಣಿಕರು ಸೇಫ್..!


ಸುಬ್ರಹ್ಮಣ್ಯ, ಸೆಪ್ಟೆಂಬರ್ 06 :  ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಆದರೆ, ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಶನಿವಾರ ರಾತ್ರಿ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಸಮೀಪ ಈ ಘಟನೆ ನಡೆದಿದೆ. ಬಿ.ಸಿ.ರೋಡ್ ಡಿಪೋಗೆ ಸೇರಿದ ಈ ಸಾರಿಗೆ ಬಸ್ ಎರ್ಮಾಯಿಲ್ ಬಳಿ ಸಂಚರಿಸುತ್ತಿದ್ದಾಗ, ಇಂಜಿನ್ ಭಾಗದಿಂದ ಏಕಾಏಕಿ ಹೊಗೆ ಹೊರಬಂದಿದೆ. ಇದನ್ನು ತಕ್ಷಣವೇ ಗಮನಿಸಿದ ಚಾಲಕ, ಯಾವುದೇ ವಿಳಂಬವಿಲ್ಲದೆ ರಸ್ತೆ ಬದಿಯಲ್ಲಿ ಬಸ್ ನಿಲ್ಲಿಸಿದ್ದಾರೆ.

ಕೂಡಲೇ ಪ್ರಯಾಣಿಕರನ್ನು ಎಚ್ಚರಿಸಿ, ಆತಂಕಕ್ಕೆ ಅವಕಾಶ ನೀಡದೆ ಎಲ್ಲರನ್ನೂ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಪ್ರಯಾಣಿಕರು ಕೆಳಗೆ ಇಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಬೆಂಕಿ ಕಾಣಿಸಿಕೊಳ್ಳಲು ತಾಂತ್ರಿಕ ದೋಷವೇ ಕಾರಣವೇ ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ, ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯದಿಂದಾಗಿ ದೊಡ್ಡದೊಂದು ಅನಾಹುತ ತಪ್ಪಿದಂತಾಗಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!