ಮಂಗಳೂರು,ಸೆ 30: ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ, ಸುಮಾರು 16 ಗ್ರಾಂ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ಡಾಮಾರು ರಸ್ತೆಯ ಬಳಿ ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂಬಾತನು ಅನುಮಾನಾಸ್ಪದವಾಗಿ ನಿಂತಿರುವುದು ತಿಳಿದುಬಂದಿದೆ. ಆತನ ವಶದಲ್ಲಿದ್ದ ಅಂದಾಜು ರೂ. 1,60,000/- ಮೌಲ್ಯದ 16 ಗ್ರಾಂ MDMA ಮಾದಕ ವಸ್ತುವನ್ನು ಕಾನೂನುಬದ್ಧವಾಗಿ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2026 ಎನ್.ಡಿ.ಪಿ.ಎಸ್. (NDPS) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ. ಆಪಾದಿತನ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 02/2020 ರಂತೆ ರಾತ್ರಿ ಕಳ್ಳತನ ಪ್ರಕರಣ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ: 79/2020 ರಂತೆ ರಾತ್ರಿ ಕಳ್ಳತನ ಪ್ರಕರಣ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ರಂತೆ ಗಾಂಜಾ ಸೇವನೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.