BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ಉಡುಪಿ

Mangaluru ನಾರಾಯಣ ಗುರು ನಿಗಮಕ್ಕೆ ₹2,500 ಕೋಟಿ ಅನುದಾನ ಬಿಡುಗಡೆಗೆ ಆಗ್ರಹ: ಕೆಪಿಸಿಸಿ ಅಧ್ಯಕ್ಷರಿಗೆ 'ನಾರಾಯಣ ಗುರು ವಿಚಾರ ವೇದಿಕೆ' ಮನವಿ


ಮಂಗಳೂರು, ಸೆಪ್ಟೆಂಬರ್ 08: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ, ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಘೋಷಿಸಿರುವ ₹2,500 ಕೋಟಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ 'ನಾರಾಯಣ ಗುರು ವಿಚಾರ ವೇದಿಕೆ, ಮಂಗಳೂರು' ವತಿಯಿಂದ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಸತ್ಯಜಿತ್ ಸುರತ್ಕಲ್,ಹಾಗೂ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಅವರಿಗೆ ಅಭಿನಂದನೆ ಸಲ್ಲಿಸಿರುವ ವೇದಿಕೆಯು, ಸಮಾಜದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡುವಂತೆ ಕೋರಿದೆ. ಕಾರಣಿಕ ಪುರುಷರಾದ ಕೋಟಿ-ಚೆನ್ನಯರು ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದೊಂದಿಗೆ ಸಮಾಜದ ಬಹುಕಾಲದ ಬೇಡಿಕೆಗಳು ಈ ಆಡಳಿತಾವಧಿಯಲ್ಲಿ ಈಡೇರುವ ವಿಶ್ವಾಸವನ್ನು ವ್ಯಕ್ತಪಡಿಸಲಾಗಿದೆ. 

ಪ್ರಮುಖ ಬೇಡಿಕೆಗಳು:

ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಐದು ವರ್ಷಗಳಲ್ಲಿ ನೀಡುವುದಾಗಿ ಭರವಸೆ ನೀಡಿರುವ ₹2,500 ಕೋಟಿ ನಿಧಿಯನ್ನು ಬಿಡುಗಡೆ ಮಾಡುವುದು.

ಕನಕ ಜಯಂತಿ, ಬಸವ ಜಯಂತಿ ಹಾಗೂ ಮಹಾವೀರ ಜಯಂತಿಯಂತೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಗೂ ಅಧಿಕೃತ ಸರ್ಕಾರಿ ರಜೆ ಘೋಷಿಸುವುದು.

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರಾವಳಿಯ ಕಾರಣಿಕ ಪುರುಷರಾದ ಕೋಟಿ-ಚೆನ್ನಯರ ಹೆಸರಿಡುವ ಕುರಿತು ರಾಜ್ಯ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸುವುದು.

ಜನಸಂಖ್ಯಾ ಆಧಾರದ ಮೇಲೆ ಸಮಾಜಕ್ಕೆ ಧಾರ್ಮಿಕ, ಸಹಕಾರಿ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸಿಗಬೇಕಾದ ಸೂಕ್ತ ಅವಕಾಶಗಳನ್ನು ಕಲ್ಪಿಸಿಕೊಡಲು ಕಾನೂನುಬದ್ಧ ಕ್ರಮ ಕೈಗೊಳ್ಳುವುದು.

ಸಮಾಜದ ಅಭಿವೃದ್ಧಿಗೆ ಪ್ರಾಮಾಣಿಕ ಒಲವು ಹೊಂದಿರುವ ಕೆಪಿಸಿಸಿ ಅಧ್ಯಕ್ಷರು ಈ ಬೇಡಿಕೆಗಳಿಗೆ ಸಕಾರ ಸ್ಪಂದಿಸಿ, ಸಮಾಜದ ಪ್ರಗತಿಗೆ ಬೆಂಬಲವಾಗಿ ನಿಲ್ಲಲಿದ್ದಾರೆ ಎಂದು ನಾರಾಯಣ ಗುರು ವಿಚಾರ ವೇದಿಕೆ ಆಶೀಸಿದೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!