BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಸೆ.27 ರಂದು ಕೊಚ್ಚಿಯಲ್ಲಿ ಕೇರಳ ಕರ್ನಾಟಕ ಜಾನಪದ ಉತ್ಸವ, ಕ್ರೀಡಾ ಅಂಕಣಕಾರ ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ


ಮಂಗಳೂರು, ಸೆ25: ಮಂಗಳೂರು, ಕಾಸರಗೋಡು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದಜಂಟಿ ಆಶ್ರಯದಲ್ಲಿ ಸೆಪ್ಟೆಂಬರ್ 27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್ ನಲ್ಲಿ ಕೇರಳ ಕರ್ನಾಟಕ ಜಾನಪದ  ಉತ್ಸವ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಖ್ಯಾತ ಕ್ರೀಡಾ ಅಂಕಣಕಾರ ಜಗದೀಶ್ ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧಕ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.ಕ್ರೀಡಾ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಳೆದ ಮೂರು ದಶಕಗಳಿಂದ ಗುರುತಿಸಿಕೊಂಡಿರುವ ಇವರು ಹಲವಾರು ರಾಜ್ಯ - ಅಂತರ್ ರಾಜ್ಯ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಹಿರಿಯ ನ್ಯಾಯವಾದಿ, ನೋಟರಿ, ಜೈನ್ ಸೊಸೈಟಿಯ ಮಾಜಿ ಅಧ್ಯಕ್ಷ ಎಲ್.ಡಿ. ಬಳ್ಳಾಲ್ ವಿಧಿವಶ

ಅಂಚನ್ ಅವರ ಕ್ರೀಡಾ ಬರವಣಿಗೆಗಾಗಿ 2013ರಲ್ಲಿ 'ಮೀಡಿಯಾ ಅವಾರ್ಡ್', 2014ರಲ್ಲಿ 'ಸಮಾಜ ರತ್ನ ' ರಾಜ್ಯ ಪ್ರಶಸ್ತಿ , 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , ಲಯನ್ಸ್ ರಾಜ್ಯೋತ್ಸವ ಪ್ರಶಸ್ತಿ ,2018ರಲ್ಲಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ; 2019ರಲ್ಲಿ ಜಾನಪದ ಲೋಕ ರಾಜ್ಯ ಪ್ರಶಸ್ತಿ  ; ನಮ್ಮ ಕುಡ್ಲ ಸಾಧಕ ಪ್ರಶಸ್ತಿ, 2020ರಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದಲ್ಲಿ  ಕೆ.ಎ.ನೆಟ್ಟಕಲ್ಲಪ್ಪ ರಾಜ್ಯ ಪ್ರಶಸ್ತಿ , 2021ರಲ್ಲಿ ಸಿದ್ಧಗಂಗಾಶ್ರೀ ರಾಜ್ಯ ಪ್ರಶಸ್ತಿ , 2022ರಲ್ಲಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಘಟಕದಿಂದ ಕೆ.ಆರ್.ಟ್ಯಾಗೋರ್ ದತ್ತಿ ನಿಧಿ ಪ್ರಶಸ್ತಿ, 2023ರಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಪುರಸ್ಕಾರ,  ಸಾಧನ ಪ್ರಶಸ್ತಿ -2023,  2024ರಲ್ಲಿ ಕರ್ನಾಟಕ ಕಲಾಶ್ರೀ ಪ್ರಶಸ್ತಿ, 2026ರಲ್ಲಿ ಜಾನಪದ ರತ್ನ ಪ್ರಶಸ್ತಿ, ಕನ್ನಡ ಪಯಸ್ವಿನಿ ಅವಾರ್ಡ್ -2026 ಅಂತರ್ ರಾಜ್ಯ ಪ್ರಶಸ್ತಿ ಹಾಗೂ ಬಸವಶ್ರೀ -2026 ಪ್ರಶಸ್ತಿಗಳು ಸೇರಿದಂತೆ ಹಲವು ಪುರಸ್ಕಾರವನ್ನು ಇವರು ಪಡೆದಿದ್ದಾರೆ .

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!