BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru CCB ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: 24 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶ, ಮೂವರು ಆರೋಪಿಗಳ ಬಂಧನ

ಮಂಗಳೂರು, ಸೆ 27: ಮಂಗಳೂರು ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಕುಖ್ಯಾತ ಜಾಲವೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸುಮಾರು 24 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರಿನಿಂದ ಎಂಡಿಎಂಎ ತಂದು, ಮಂಗಳೂರಿನಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

ಈ ಹಿನ್ನೆಲೆಯಲ್ಲಿ, ಸಿಸಿಬಿ ಪೊಲೀಸರು ಸೆಪ್ಟೆಂಬರ್ 26ರ ಸಂಜೆ ಉಳ್ಳಾಲ ತಾಲೂಕಿನ ಮುಡಿಪು ಕಾಯರ್ಗೋಳಿ ಕ್ರಾಸ್ ಬಳಿ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಬಂಧಿತರಿಂದ 24 ಲಕ್ಷ ರೂ. ಮೌಲ್ಯದ 240 ಗ್ರಾಂ ಎಂಡಿಎಂಎ, 4 ಮೊಬೈಲ್ ಫೋನ್ ಹಾಗೂ ಸಾಗಾಟಕ್ಕೆ ಬಳಸಿದ ಟೆಂಪೋ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಅಂದಾಜು 29 ಲಕ್ಷದ 80 ಸಾವಿರ ರೂಪಾಯಿ ಎಂದು ಅಂದಾಜಿಸಲಾಗಿದೆ.ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಆರೋಪಿಗಳ ವಿವರ ಹಾಗೂ ಕ್ರಿಮಿನಲ್ ಹಿನ್ನೆಲೆ:

ಬಂಧಿತರನ್ನು ಮುಡಿಪುವಿನ ನವಾಜ್ @ ನವ್ವಾ (35), ಮೊಹಮ್ಮದ್ ಆರೀಫ್ ಎನ್ (36) ಹಾಗೂ ಲಾಯ್ಡ್ ಡಿಸೊಜಾ (35) ಎಂದು ಗುರುತಿಸಲಾಗಿದೆ.

ಪ್ರಮುಖ ಆರೋಪಿ ನವಾಜ್ ವಿರುದ್ಧ ಹಲ್ಲೆ, ಬೆದರಿಕೆ, ಕೊಲೆಯತ್ನ, ಅಪಹರಣ, ಅತ್ಯಾಚಾರ, ವಂಚನೆ ಹಾಗೂ ದನಗಳ್ಳತನ ಸೇರಿದಂತೆ ಬರೋಬ್ಬರಿ 16 ಗಂಭೀರ ಪ್ರಕರಣಗಳು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ. ವಿಶೇಷವಾಗಿ ಈತನ ಮೇಲೆ ಮಾದಕವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಒಟ್ಟು 4 ಕೇಸುಗಳು ಇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಮಂಗಳೂರು ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಸಿಸಿಬಿ ಅಧಿಕಾರಿ ಹಾಗೂ ಸಿಬ್ಬಂದಿ ಈ ಕಾರ್ಯಾಚರಣೆ ನಡೆಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!