BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru Lokayukta Raid ದಕ್ಷಿಣ ಕನ್ನಡ ಜಿಲ್ಲೆಯ 6 ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ


ಮಂಗಳೂರು,ಸೆಪ್ಟೆಂಬರ್ 09 : ಲೋಕಾಯುಕ್ತ ಕೇಂದ್ರ ಕಛೇರಿಯಲ್ಲಿ ದಾಖಲಾಗಿರುವ ಸುಮೊಟೊ (Suo Motu) ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಆರು ಗ್ರಾಮ ಪಂಚಾಯತ್‌ಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಶ್ರೀ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್‌ಗಳಲ್ಲಿ ಏಕಕಾಲಕ್ಕೆ ಈ ತನಿಖಾ ಭೇಟಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಹಾಗೂ ನೆಕ್ಕಿಲಾಡಿ ಗ್ರಾಮ ಪಂಚಾಯತ್, ಸುಳ್ಯ ತಾಲೂಕಿನ ಕಲ್ಮಡ್ಕ ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್, ಹಾಗೂ ಬೆಳ್ತಂಗಡಿ ತಾಲೂಕಿನ ಉಜಿರೆ ಮತ್ತು ಲಾಯಿಲ ಗ್ರಾಮ ಪಂಚಾಯತ್‌ಗಳು ಸೇರಿದಂತೆ ಒಟ್ಟು 06 ಗ್ರಾಮ ಪಂಚಾಯತ್‌ಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿದೆ.

ಮಂಗಳೂರು ಲೋಕಾಯುಕ್ತ ಘಟಕದ ಪೊಲೀಸ್ ಉಪಾಧಿಕ್ಷಕರಾದ ಡಾ. ಗಾನ ಪಿ ಕುಮಾರ್,  ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಕಾರವಾರ ಲೋಕಾಯುಕ್ತ ಘಟಕದ ಡಿವೈಎಸ್‌ಪಿ ಧನ್ಯ ನಾಯಕ್, ನಿರೀಕ್ಷಕ ರವಿ ಎನ್.ಎನ್., ಉಡುಪಿ ಲೋಕಾಯುಕ್ತ ಘಟಕದ ಡಿವೈಎಸ್‌ಪಿ ಹಾಲ ಮೂರ್ತಿ ರಾವ್ ವಿ.ಎಸ್., ಹಾಗೂ ನಿರೀಕ್ಷಕ ಮಂಜುನಾಥ್ ನೇತೃತ್ವದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡ ಈ ದಿಢೀರ್ ಭೇಟಿಯಲ್ಲಿ ಪಾಲ್ಗೊಂಡಿತ್ತು.

ಗ್ರಾಮ ಪಂಚಾಯತ್‌ಗಳಲ್ಲಿನ ಆಡಳಿತಾತ್ಮಕ ನ್ಯೂನ್ಯತೆಗಳು, ದಾಖಲೆಗಳ ನಿರ್ವಹಣೆ ಮತ್ತು ಸಾರ್ವಜನಿಕ ಸೇವೆಗಳ ಸ್ಥಿತಿಗತಿಗಳನ್ನು ಪರಿಶೀಲಿಸಿರುವ ಲೋಕಾಯುಕ್ತ ತಂಡ, ಅಲ್ಲಿನ ಲೋಪದೋಷಗಳ ಕುರಿತು ವಿಸ್ತೃತ ವರದಿಯನ್ನು ಶೀಘ್ರದಲ್ಲೇ ಲೋಕಾಯುಕ್ತ ಕೇಂದ್ರ ಕಛೇರಿಗೆ ಸಲ್ಲಿಸಲಿದೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!