BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru: MCC strict directive to clear unauthorized street vendors ಮಂಗಳೂರು: ಅನಧಿಕೃತ ಬೀದಿ ವ್ಯಾಪಾರಿಗಳ ತೆರವಿಗೆ MCC ಕಟ್ಟುನಿಟ್ಟಿನ ಸೂಚನೆ


ಮಂಗಳೂರು,ಸೆಪ್ಟೆಂಬರ್ 03 : ಮಂಗಳೂರುನಗರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅನಧಿಕೃತ ಬೀದಿ ವ್ಯಾಪಾರಿಗಳನ್ನು ಕೂಡಲೇ ತೆರವುಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆ (MCC) ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

ಸಾರ್ವಜನಿಕ ಸ್ಥಳಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಪಾದಚಾರಿ ಮಾರ್ಗಗಳಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವುದರಿಂದ ಸಾರ್ವಜನಿಕರ ಓಡಾಟಕ್ಕೂ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ನಾಗರಿಕರು ಮತ್ತು ವಿವಿಧ ಸಂಘಟನೆಗಳಿಂದ ಪಾಲಿಕೆಗೆ ನಿರಂತರ ದೂರುಗಳು ಬಂದಿದ್ದವು.

ಪಾಲಿಕೆಯ ಎಚ್ಚರಿಕೆ ಹಾಗೂ ನಿಯಮಗಳು:

ಅಧಿಕೃತರಿಗೆ ವಿನಾಯಿತಿ: ಮಹಾನಗರ ಪಾಲಿಕೆಯಿಂದ ಅಧಿಕೃತವಾಗಿ ನೀಡಲಾಗಿರುವ ಗುರುತಿನ ಚೀಟಿ ಮತ್ತು ವ್ಯಾಪಾರ ಪ್ರಮಾಣಪತ್ರ ಹೊಂದಿರುವ ವ್ಯಾಪಾರಿಗಳನ್ನು ಮಾತ್ರ ಮುಂದುವರಿಯಲು ಅವಕಾಶ ನೀಡಲಾಗಿದೆ.

ಸ್ವಯಂ ತೆರವಿಗೆ ಸೂಚನೆ: ಉಳಿದ ಎಲ್ಲಾ ಅನಧಿಕೃತ ವ್ಯಾಪಾರಿಗಳು ತಾವಾಗಿಯೇ ತಾವು ವ್ಯಾಪಾರ ನಡೆಸುತ್ತಿರುವ ಸ್ಥಳಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ.  ಒಂದು ವೇಳೆ ಅನಧಿಕೃತ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ತೆರವುಗೊಳಿಸಲು ವಿಫಲವಾದರೆ, 'ಬೀದಿ ವ್ಯಾಪಾರಿಗಳ ಕಾಯ್ದೆ'ಯ ನಿಯಮಗಳ ಅನ್ವಯ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಂಸಿಸಿ ಎಚ್ಚರಿಕೆ ನೀಡಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!