BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಮಂಗಳೂರು ಸಬ್ ಜೈಲಿನಲ್ಲಿ ಮಾಡೂರು ಯುಸುಫ್ ಹತ್ಯೆ ಪ್ರಕರಣ: ಐವರು ಆರೋಪಿಗಳು ದೋಷಿ, ಐವರ ಖುಲಾಸೆ


ಮಂಗಳೂರು,ಸೆ 28 : 2015ರಲ್ಲಿ ಮಂಗಳೂರು ಸಬ್ ಜೈಲಿನಲ್ಲಿ ನಡೆದಿದ್ದ ಕುಖ್ಯಾತ ಮಾಡೂರು ಯುಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 28ರಂದು ಮಂಗಳೂರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು, ಲಿತೇಶ್ ಪೂಜಾರಿ, ಶೋಭರಾಜ್, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ ಎಂಬ ಐವರು ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದ್ದು, ಅವರನ್ನು ದೋಷಿಗಳೆಂದು ಘೋಷಿಸಿದೆ. ಈ ದೋಷಿಗಳಿಗೆ ವಿಧಿಸಬೇಕಾದ ಶಿಕ್ಷೆಯ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ.

ಮತ್ತೊಂದೆಡೆ, ಇದೇ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಶರಣ್ ಪೂಜಾರಿ, ಮಹೇಶ್ ಕುಮಾರ್, ಕಮಲಾಕ್ಷ ಪೂಜಾರಿ, ಸತೀಶ್ ಪೂಜಾರಿ ಹಾಗೂ ಲತೀಶ್ ಅವರನ್ನು ನ್ಯಾಯಾಲಯವು ದೋಷಮುಕ್ತಗೊಳಿಸಿ (ಖುಲಾಸೆ) ಆದೇಶಿಸಿದೆ. ಇವರಲ್ಲಿ ಆರೋಪಿಯಾಗಿದ್ದ ಸತೀಶ್ ಪೂಜಾರಿ ಅವರು ಈಗಾಗಲೇ ಮೃತಪಟ್ಟಿರುತ್ತಾರೆ.

ಹಿನ್ನೆಲೆ: 2015ರ ನವೆಂಬರ್ 2ರಂದು ಮಂಗಳೂರು ಸಬ್ ಜೈಲಿನಲ್ಲಿ ಮಾಡೂರು ಯುಸುಫ್ ಎಂಬಾತನ ಕೊಲೆ ನಡೆದಿತ್ತು. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿ, ಅಂದಿನ ತನಿಖಾಧಿಕಾರಿ ಎಸಿಪಿ ತಿಲಕ್ ಚಂದ್ರ ಅವರು 2016ರ ಜನವರಿ 28ರಂದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆಯ ಬಳಿಕ ನ್ಯಾಯಾಲಯವು ಇಂದು ಈ ಮಹತ್ವದ ತೀರ್ಪು ನೀಡಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!