BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ಶಿಥಿಲಗೊಂಡ ಕಟ್ಟಡಗಳ ಸುರಕ್ಷತಾ ಪರಿಶೀಲನೆಗೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ


ಮಂಗಳೂರು, ಸೆ.30: ಮಂಗಳೂರು: ನಗರದಲ್ಲಿ ಇತ್ತೀಚೆಗೆ ಶಿಥಿಲಗೊಂಡ ಕಟ್ಟಡ ಬಿದ್ದು ವಿದ್ಯಾರ್ಥಿಯೊಬ್ಬರು ದುರ್ಮರಣಕ್ಕೀಡಾದ ದುರ್ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಲು ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ಯಂಗ್ ಡೆಮಾಕ್ರಟ್ಸ್ ಮಂಗಳೂರು ನಗರ ಜಿಲ್ಲಾ ಕನ್ವೀನರ್ ಇರ್ಫಾನ್ ತುಂಬೆ, ಜಾಯಿಂಟ್ ಕನ್ವೀನರ್ ಗಳಾದ ತನ್ವೀರ್ ಉಳ್ಳಾಲ, ಶರ್ಫುದ್ಧಿನ್ ಬಜ್ಪೆ ಹಾಗೂ , ಜಿಲ್ಲಾ ಸಮಿತಿ ಸದಸ್ಯರಾದ ಹಮೀದ್, ಅನ್ಸಾರ್ ಕುದ್ರೋಳಿ ಉಪಸ್ಥಿತರಿದ್ದರು.

ಪ್ರಮುಖ ಬೇಡಿಕೆಗಳು:

ನಗರದ ಎಲ್ಲಾ ಹಳೆಯ ಮತ್ತು ಶಿಥಿಲಗೊಂಡ ಕಟ್ಟಡಗಳನ್ನು ತಜ್ಞರ ಮೂಲಕ ಪರಿಶೀಲಿಸಿ ಅಪಾಯಕಾರಿ ಕಟ್ಟಡಗಳನ್ನು ಗುರುತಿಸುವುದು.

ಅಂತಹ ಕಟ್ಟಡಗಳ ಮಾಲೀಕರಿಗೆ ಸೂಚನೆ ನೀಡಿ, ದುರಸ್ತಿ ಮಾಡಿಸಲು ಅಥವಾ ನಿಯಮಾನುಸಾರ ತೆರವುಗೊಳಿಸಲು ಕ್ರಮ ಕೈಗೊಳ್ಳುವುದು.

ಕಟ್ಟಡ ಪರವಾನಗಿ ನವೀಕರಿಸುವ ಸಂದರ್ಭದಲ್ಲಿ ಕಟ್ಟಡದ ಸ್ಥಿರತೆ ಹಾಗೂ ಸುರಕ್ಷತೆಯನ್ನು ಕಡ್ಡಾಯವಾಗಿ ಪರಿಶೀಲಿಸುವುದು.

ಶಾಲಾ-ಕಾಲೇಜುಗಳು ಮತ್ತು ಜನಸಂದಣಿಯಿರುವ ಪ್ರದೇಶಗಳಲ್ಲಿನ ಅಪಾಯಕಾರಿ ಕಟ್ಟಡಗಳ ಸುತ್ತ ಸುರಕ್ಷತಾ ತಡೆಗೋಡೆ ಹಾಗೂ ಎಚ್ಚರಿಕೆ ಫಲಕಗಳನ್ನು ಅಳವಡಿಸುವುದು.

ದುರ್ಘಟನೆಗೆ ಕಾರಣವಾದ ಕಟ್ಟಡದ ಪರವಾನಗಿ ರದ್ದುಪಡಿಸಿ, ನಿಯಮಾನುಸಾರ ತೆರವಿಗೆ ಆದೇಶಿಸುವುದು.

ಮುಂದಿನ ದಿನಗಳಲ್ಲಿ ಇಂತಹ ಅನಾಹುತಗಳು ನಡೆಯದಂತೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.


📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!