BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mangaluru ತಕ್ಷಣ ಆರೋಗ್ಯ ಸುರಕ್ಷಾ ಸೌಲಭ್ಯ ಜಾರಿ ಮಾಡಿ, ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಿ: ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯ


ಮಂಗಳೂರು, ಸೆ. 30: ಸ್ಫೋಟ ಸಂಭವಿಸಿದ ಮಂಗಳೂರಿನ ಎಂಆರ್‌ಪಿಎಲ್ ಸ್ಥಾವರಕ್ಕೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎಂಆರ್‌ಪಿಎಲ್ ಸ್ಥಾವರದಲ್ಲಿ ನಡೆದ ಸ್ಫೋಟವು ಸುರತ್ಕಲ್ ಮಾತ್ರವಲ್ಲದೆ ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ಭೂಕಂಪನದಂತಹ ಸ್ಫೋಟ ಸೃಷ್ಟಿಯಾಗಿದ್ದು, ಇದು ಗಂಭೀರ ಎಚ್ಚರಿಕೆಯ ಸಂದೇಶವಾಗಿದೆ ಎಂದು ಶಾಸಕರು ತಿಳಿಸಿದರು. ಮೊದಲ ವರದಿಯಲ್ಲಿ 9 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿತ್ತು. ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ಸಂದರ್ಭದಲ್ಲಿ ಸ್ಥಾವರದ ಬಳಿ ಕರ್ತವ್ಯ ನಿರತರಾಗಿದ್ದ ನೌಕರ ಮೃತಪಟ್ಟಿರುವುದು ಬಳಿಕ ತಡವಾಗಿ ತಿಳಿದು ಆಘಾತವಾಗಿದೆ ಎಂದು ಅವರು ಹೇಳಿದರು.

"ಇಂತಹ ದುರ್ಘಟನೆ ಮುಂದೆ ನಡೆಯಬಾರದು. ಸ್ಫೋಟದ ನಿಖರ ಕಾರಣ ಪತ್ತೆಹಚ್ಚಿ ಸಮಗ್ರ ತನಿಖೆ ನಡೆಸಬೇಕು ಹಾಗೂ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚಿನ ಪರಿಹಾರ ಒದಗಿಸಬೇಕು. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಕಂಪನಿಯೇ ಭರಿಸಿ, ಸೂಕ್ತ ಪರಿಹಾರ ನೀಡಬೇಕು" ಎಂದು ಅವರು ಒತ್ತಾಯಿಸಿದರು.

ಇಂತಹ ಅಪಾಯಕಾರಿ ಸ್ಥಳದಲ್ಲಿ ಕೆಲಸ ಮಾಡುವ ನೌಕರವೃಂದಕ್ಕೆ ಸಂಸ್ಥೆಯು ಆರೋಗ್ಯ ಸುರಕ್ಷಾ ಸೌಲಭ್ಯವನ್ನು ತಕ್ಷಣ ಜಾರಿ ಮಾಡಬೇಕು ಎಂದು ಒತ್ತಾಯಿಸಿದ ಶಾಸಕರು, ಕಾರ್ಮಿಕರಿಗೆ ಸೂಕ್ತ ರಕ್ಷಣಾ ಸೌಲಭ್ಯ ಮತ್ತು ಮೂಲಸೌಕರ್ಯ ಒದಗಿಸಲಾಗಿದೆಯೇ ಎಂಬುದನ್ನು ಆಡಳಿತ ಮಂಡಳಿ ಖಾತ್ರಿಪಡಿಸಿಕೊಳ್ಳಬೇಕು ಎಂದರು. ಅಲ್ಲದೆ, ಸ್ಫೋಟದಿಂದ ಸುತ್ತಮುತ್ತಲಿನ ಮನೆ ಹಾಗೂ ಕಟ್ಟಡಗಳಿಗೆ ಹಾನಿಯಾಗಿದ್ದಲ್ಲಿ ಕೂಡಲೇ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಎಂಆರ್‌ಪಿಎಲ್ ದುರಂತದಲ್ಲಿ ಮನೀಶ್ ಕರ್ಕಡ ಅಕಾಲಿಕ ನಿಧನ: ಹಳೆಯಂಗಡಿ ಚರ್ಚ್ ಹಾಗೂ ಕುಟುಂಬ ವರ್ಗದಿಂದ ಗಾಢ ಸಂತಾಪ

ಬಳಿಕ ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿರುವ ಶಾಸಕ ಡಾ. ಭರತ್ ಶೆಟ್ಟಿ ಅವರು, ಮೃತ ನೌಕರರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.



📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!