BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

MRPL ಘಟಕದಲ್ಲಿ ಸ್ಫೋಟದ ಹಿನ್ನೆಲೆ ಅಧಿಕೃತ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸ್ಥಳಕ್ಕೆ ಭೇಟಿ


ಮಂಗಳೂರು,ಸೆ 30 : MRPL ಘಟಕದಲ್ಲಿ ಸಂಭವಿಸಿದ ಸ್ಫೋಟದ ಹಿನ್ನೆಲೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂಬಂಧಪಟ್ಟ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.  MRPL ಅಧಿಕಾರಿಗಳು, ಪೊಲೀಸ್ ಆಯುಕ್ತರು, ಬಜ್ಪೆ ಪಂಚಾಯತ್ ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಂಸದರು ತಿಳಿಸಿದ್ದಾರೆ.   ಸ್ಫೋಟದ ಬಳಿಕದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದ್ದು, ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಮತ್ತು ಸುರಕ್ಷತಾ ಕಾರ್ಯಾಚರಣೆಗಳನ್ನು ತ್ವರಿತವಾಗಿ ಕೈಗೊಳ್ಳಲು ಸೂಚಿಸಲಾಗಿದೆ.   ತುರ್ತು ಪರಿಸ್ಥಿತಿ ಎದುರಿಸಲು ಸ್ಥಳೀಯ ಆಸ್ಪತ್ರೆಗಳು ಸನ್ನದ್ಧವಾಗಿರುವಂತೆ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರು ಆತಂಕ ಪಡಬಾರದು ಎಂದು ಮನವಿ ಮಾಡಲಾಗಿದೆ.   ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಲು ಬೆಳ್ತಂಗಡಿಯ ತಮ್ಮ ಪೂರ್ವನಿಗದಿತ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಸಂಸದರು ಘಟನಾ ಸ್ಥಳಕ್ಕೆ ತೆರಳುತ್ತಿದ್ದು ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಶಾಂತಿಯುತವಾಗಿ ಆಡಳಿತ ಮಂಡಳಿಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.   

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!