BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Mulki Temple theft Arrest ಮೂಲ್ಕಿ: ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ. ಮೌಲ್ಯದ ಆಭರಣ ಕಳ್ಳತನ - ನಾಲ್ವರ ಬಂಧನ


ಮೂಲ್ಕಿ,ಸೆಪ್ಟೆಂಬರ್ 08 : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಕಿಲ್ಪಾಡಿಯ ಕೋರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಭಾರಿ ಮೊತ್ತದ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ತಲೆಮರೆಸಿಕೊಂಡಿರುವ ಉಳಿದಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ಆರೋಪಿಗಳ ವಿವರ:

ಬಂಧಿತ ಆರೋಪಿಗಳನ್ನು ಪಡುಬಿದ್ರೆ ಕಂಚಿನಡ್ಕ ನಿವಾಸಿ ಜಾಹಿದ್ ಸಿನಾನ್, ಕಾರ್ಕಳ ನಿಟ್ಟೆ ಮೂಲದವರಾಗಿಪ್ರಸ್ತುತ ಕಾರ್ನಾಡ್ ಬಳಿ ವಾಸವಿರುವ ಯಾಸಿನ್ ಹಾಗೂ ದಾವಣಗೆರೆ ನಿವಾಸಿಗಳಾದ ಅಬ್ದುಲ್ ಜುಮಾಲ್ ಮತ್ತು ಮಹಮ್ಮದ್ ಆಫ್ರಿದ್ ಎಂದು ಗುರುತಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನುಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಘಟನೆಯ ಹಿನ್ನೆಲೆ:

ದೈವಸ್ಥಾನದಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಪೂರ್ವಯೋಜಿತ ಸಂಚು ರೂಪಿಸಿದ್ದ ಖದೀಮರು, ದೈವಸ್ಥಾನದ ಕಡಸಾಲೆ ಸೇರಿದಂತೆ ಕೋಟ್ಯಂತರ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಕಳುವಾದ ಒಟ್ಟು ಆಭರಣಗಳ ಮೌಲ್ಯ ಅಂದಾಜು 36 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

ಈ ಘಟನೆಯು ಸ್ಥಳೀಯವಾಗಿ ಭಾರೀ ಕುತೂಹಲ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದು, ದೈವಸ್ಥಾನದ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿರುವ ಪೊಲೀಸರು, ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!