BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದೇಶ

Mumbai ಹಿರಿಯ ನಟ ಹಾಗೂ ಸಿನಿ ದಿಗ್ಗಜ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ 'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿ ಘೋಷಣೆ

ಮುಂಬೈ, ಸೆಪ್ಟೆಂಬರ್ 16: ಹಿರಿಯ ನಟ ಹಾಗೂ ಸಿನಿ ದಿಗ್ಗಜ  ಅನಂತ್ ನಾಗ್ ಅವರಿಗೆ ಭಾರತೀಯ ಸಿನಿಮಾರಂಗದ ಅತ್ಯುನ್ನತ ಗೌರವವಾದ ಪ್ರತಿಷ್ಠಿತ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ' (2024) ಘೋಷಿಸಲಾಗಿದೆ. 

ಸೆಪ್ಟೆಂಬರ್ 22, 2026ರಂದು ಗುಜರಾತಿನ ಕೆವಾಡಿಯಾದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.

ಐದು ದಶಕಗಳಿಗೂ ಅಧಿಕ ಕಾಲದ ಸುದೀರ್ಘ ವೃತ್ತಿಜೀವನದಲ್ಲಿ ಅವರು ಕನ್ನಡ, ಹಿಂದಿ, ತೆಲುಗು, ಮರಾಠಿ, ಮಲಯಾಳಂ ಸೇರಿದಂತೆ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಸಮಾಂತರ ಮತ್ತು ಮುಖ್ಯವಾಹಿನಿ ಸಿನಿಮಾಗಳಲ್ಲಿ ತಮ್ಮ ಸಹಜ ಅಭಿನಯದಿಂದ ಅವರು ವಿಶೇಷ ಗುರುತು ಮೂಡಿಸಿದ್ದಾರೆ. ದೂರದರ್ಶನದ ಜನಪ್ರಿಯ ಧಾರಾವಾಹಿ 'ಮಾलगುಡಿ ಡೇಸ್' ನಲ್ಲೂ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿ ಮನೆಮಾತಾಗಿದ್ದರು.

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ: 

ಹಿರಿಯ ನಟ ಅನಂತ್ ನಾಗ್ ಅವರಿಗೆ ಈ ಗೌರವ ಸಂದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದು, "ಅವರ ಸಹಜ ಅಭಿನಯ, ಬಹುಮುಖ ಪ್ರತಿಭೆ ಮತ್ತು ಶ್ರೇಷ್ಠ ಕಲಾಪ್ರತಿಭೆಯು ಭಾರತೀಯ ಹಾಗೂ ಕನ್ನಡ ಚಿತ್ರರಂಗದ ಮೇಲೆ ಅಳಿಸಲಾಗದ ಪ್ರಭಾವ ಬೀರಿದೆ" ಎಂದು ಪ್ರಶಂಸಿಸಿದ್ದಾರೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಂದ ಅಭಿನಂದನೆ

"ಕನ್ನಡ ಚಿತ್ರರಂಗದ ಹಿರಿಯ ನಟ, ಅಪ್ರತಿಮ ಕಲಾವಿದರು ಹಾಗೂ ಬಹುಮುಖ ಪ್ರತಿಭೆಯ ಅನಂತ್‌ ನಾಗ್‌ ಅವರಿಗೆ ಭಾರತೀಯ ಸಿನಿಮಾ ರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 2024ನೇ ಸಾಲಿನ ದಾದಾಸಾಹೇಬ್‌ ಪಾಲ್ಕೆ ಪ್ರಶಸ್ತಿ ದೊರೆತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ ಸಂಗತಿ" ಎಂದು ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

"ಕನ್ನಡ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿರುವ ಅನಂತ್ ನಾಗ್ ಅವರ ಕಲಾಸೇವೆ ಅಪಾರ. ಭಾರತೀಯ ಸಿನಿರಂಗಕ್ಕೆ ಇವರ ಕೊಡುಗೆಗಳನ್ನು ಗುರುತಿಸಿ ಭಾರತ ಸರ್ಕಾರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಿಸಿ ಅಭಿಜಾತ ಕಲಾವಿದರನ್ನು ಗೌರವಿಸಿದೆ. ಅನಂತ್‌ ನಾಗ್‌ ಅವರಿಗೆ ನಾಡಿನ‌ ಜನತೆಯ ಪರವಾಗಿ ಹೃದಯಪೂರ್ವಕ ಅಭಿನಂದನೆಗಳು. ಅವರ ನಟನೆ, ಕಲಾ ಪಯಣ ಮುಂದಿನ ಪೀಳಿಗೆಗಳಿಗೂ ಸ್ಫೂರ್ತಿಯಾಗಲಿ" ಎಂದು ಸಿಎಂ ಹಾರೈಸಿದ್ದಾರೆ.

ಕಳೆದ ವರ್ಷ (2025 ರಲ್ಲಿ) ಅವರಿಗೆ 'ಪದ್ಮ ಭೂಷಣ' ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಈಗ ಭಾರತೀಯ ಚಿತ್ರರಂಗದ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯೂ ಲಭಿಸಿರುವುದು ಕನ್ನಡಿಗರಿಗೆ ಹಾಗೂ ಕರಾವಳಿ ಭಾಗಕ್ಕೆ ಹೆಮ್ಮೆಯ ವಿಷಯವಾಗಿದೆ.




📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!