BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

NITK Sutathkal Fraud ಸುರತ್ಕಲ್ ಎನ್‌ಐಟಿಕೆ ಹಣ ದುರುಪಯೋಗ ಪ್ರಕರಣ: ಇಬ್ಬರು ಬೋಧಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು


ಮಂಗಳೂರು,ಸೆಪ್ಟೆಂಬರ್ 04: ಸುರತ್ಕಲ್  ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯ (NITK) ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಇಬ್ಬರು ಅಧ್ಯಾಪಕರ ವಿರುದ್ಧ ಸಾರ್ವಜನಿಕ ಸೇವಕರ ನಂಬಿಕೆದ್ರೋಹ ಸೇರಿದಂತೆ ವಿವಿಧ ಕಾನೂನು ಕಲಂಗಳಡಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಹಣಕಾಸು ಅಕ್ರಮದ ಕುರಿತು ಎನ್‌ಐಟಿ ಆಡಳಿತ ಮಂಡಳಿಯು ಮೊದಲು ಆಂತರಿಕ ತನಿಖೆ ನಡೆಸಿತ್ತು. ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ಬೋಧಕರು ಹಣಕಾಸಿನ ದುರುಪಯೋಗ ಎಸಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಎನ್‌ಐಟಿಕೆ ಅಧಿಕಾರಿಗಳು ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡಿರುವ ಪೊಲೀಸರು, ಆರೋಪಿ ಬೋಧಕರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ  ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!