BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Padma Shri Recipient Harekala Hajabba Receives Election Commission Notice ಪದ್ಮಶ್ರೀ ಹರೇಕಳ ಹಾಜಬ್ಬಗೆ ಚುನಾವಣಾ ಆಯೋಗದಿಂದ ನೋಟಿಸ್..!


ಮಂಗಳೂರು, ಸೆಪ್ಟೆಂಬರ್ 07 : ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಾಗಿ ದೇಶ-ವಿದೇಶಗಳಲ್ಲಿ ಖ್ಯಾತಿ ಗಳಿಸಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. 

2002ರ ಮತದಾರರ ಪಟ್ಟಿಯಲ್ಲಿ ಇವರ ಹೆಸರು ಕೇವಲ 'ಹಾಜಬ್ಬ' ಎಂದು ಮಾತ್ರ ನಮೂದಾಗಿತ್ತು. ಆದರೆ, ಪ್ರಸ್ತುತ ಅವರ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಮತ್ತು ಮತದಾರರ ಗುರುತಿನ ಚೀಟಿಯಲ್ಲಿ 'ಹರೇಕಳ ಹಾಜಬ್ಬ' ಎಂದಿದೆ. ಹೆಸರು ತಾಳೆಯಾಗದ ಕಾರಣ ಎಸ್‌ಐಆರ್ (SIR) ಪ್ರಕ್ರಿಯೆಯಡಿ ಈ ನೋಟಿಸ್ ನೀಡಲಾಗಿದೆ.

ಈ ಬಗ್ಗೆ ಪ್ರತಕ್ರೀಯಿಸಿರುವ  ಹರೇಕಳ ಹಾಜಬ್ಬ, "ಇಂದು ಬೆಳಗ್ಗೆ ಅಂಗನವಾಡಿ ಕಾರ್ಯಕರ್ತೆ ನನಗೆ ನೋಟಿಸ್ ನೀಡಿದ್ದು, ಸೆಪ್ಟೆಂಬರ್ 11ರ ಶುಕ್ರವಾರದಂದು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಗ್ರಾಮ ಪಂಚಾಯತ್‌ಗೆ ಬರುವಂತೆ ತಿಳಿಸಿದ್ದಾರೆ. ಅದರಂತೆ ನಾನು ಅಂದು ಪಂಚಾಯತ್‌ಗೆ ತೆರಳಿ ದಾಖಲೆಗಳನ್ನು ಸಲ್ಲಿಸುತ್ತೇನೆ. ಇದರಿಂದ ಸಮಸ್ಯೆಗೆ ಪರಿಹಾರ ಸಿಗುವ ವಿಶ್ವಾಸವಿದೆ" ಎಂದು ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!