BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Pancha guarantees have transformed people's lives and set a model for the entire country: Minister U.T. Khader ಪಂಚ ಗ್ಯಾರಂಟಿಗಳು ಜನರ ಜೀವನವನ್ನೇ ಬದಲಿಸಿವೆ, ಇಂದು ದೇಶಕ್ಕೇ ಮಾದರಿಯಾಗಿವೆ: ಸಚಿವ ಯು.ಟಿ. ಖಾದರ್


ಮಂಗಳೂರು,ಸೆಪ್ಟೆಂಬರ್ 01 : ಪಂಚಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳ್ಳುವ ಸಂದರ್ಭದಲ್ಲಿ ರಾಜ್ಯದ ಆರ್ಥಿಕ ಸ್ಥಿತಿಯ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ಟೀಕೆಗಳಿಗೆ ಒಳಗಾಗಿದ್ದರೂ, ಇಂದು ಈ ಯೋಜನೆಗಳು ದೇಶಕ್ಕೇ ಮಾದರಿಯಾದ ಜನಪರ ಹಾಗೂ ಯಶಸ್ವಿ ಯೋಜನೆಗಳಾಗಿ ಹೊರಹೊಮ್ಮಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಭಿಪ್ರಾಯಪಟ್ಟಿದ್ದಾರೆ.

ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಮಂಗಳೂರು ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ‘ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ತಾಲೂಕು ಮಟ್ಟದ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜನಜೀವನದಲ್ಲಿ ಬದಲಾವಣೆ:

ಸಮರ್ಪಕ ಆಡಳಿತ ವ್ಯವಸ್ಥೆಯಿಂದ ಈ ಯೋಜನೆಗಳು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಗೊಂಡಿವೆ. ಇದು ಕೇವಲ ಚುನಾವಣಾ ಭರವಸೆಯಾಗಿರದೆ, ಜನರ ಜೀವನಮಟ್ಟದಲ್ಲಿ ಸಕಾರಾತ್ಮಕ ಬದಲಾವಣೆ ತಂದಿರುವುದನ್ನು ದಾಖಲೆಗಳೇ ಸಾಬೀತುಪಡಿಸುತ್ತವೆ ಎಂದ ಸಚಿವರು, ಗೃಹಲಕ್ಷ್ಮಿಯಿಂದ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಗೃಹಜ್ಯೋತಿಯಿಂದ ಉಚಿತ ವಿದ್ಯುತ್, ಶಕ್ತಿಯಿಂದ ಉಚಿತ ಪ್ರಯಾಣ, ಅನ್ನಭಾಗ್ಯದಿಂದ ಆಹಾರ ಭದ್ರತೆ ಹಾಗೂ ಯುವನಿಧಿಯಿಂದ ಯುವಜನರಿಗೆ ಆರ್ಥಿಕ ಬಲ ಸಿಕ್ಕಿದೆ ಎಂದು ವಿವರಿಸಿದರು. ಸರ್ಕಾರದ ನೆರವಿನಿಂದ ಫಲಾನುಭವಿಗಳು ಸ್ವಾಭಿಮಾನ ಮತ್ತು ಆತ್ಮವಿಶ್ವಾಸದಿಂದ ಗೌರವಯುತ ಬದುಕು ಸಾಗಿಸುತ್ತಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಅವರು ‘ಸಂಜೀವಿನಿ ಮಾಸಿಕ ಸಂತೆ’ಯನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಲವೀನಾ ಪಿಂಟೋ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ವಿಧಾನಪರಿಷತ್ ಶಾಸಕ ಐವನ್ ಡಿಸೋಜಾ, ಜಿಲ್ಲಾ ಪಂಚಾಯತ್ ಸಿಇಒ ನರ್ವಾಡೆ ವಿನಾಯಕ ಕಾರ್ಬಾರಿ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಉಮರ್ ಯು.ಹೆಚ್., ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಆಡಳಿತ ಅಧಿಕಾರಿ ಶಕುಂತಲಾ ಶೆಣೈ ಸ್ವಾಗತಿಸಿ, ಗ್ರಾಮೀಣ ಉದ್ಯೋಗ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ಕಾರ್ಯಕ್ರಮ ನಿರೂಪಿಸಿದರು.

https://youtube.com/shorts/WZIi-UyoEpM?feature=share



📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!