BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Police Raid to Mangaluru Jail ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಿಢೀರ್ ದಾಳಿ: 10 ಮೊಬೈಲ್ ಫೋನ್‌ಗಳು ವಶಕ್ಕೆ


ಮಂಗಳೂರು, ಸೆಪ್ಟೆಂಬರ್ 08 : ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ನ್ಯಾಯಾಂಗ ಬಂಧನದಲ್ಲಿದ್ದ ಕೈದಿಗಳಿಂದ ಅಕ್ರಮವಾಗಿ ಬಳಸುತ್ತಿದ್ದ ಒಟ್ಟು 10 ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡಿರುವ ಪ್ರಮುಖ ಘಟನೆ ವರದಿಯಾಗಿದೆ.

ಜೈಲಿನಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ, ಸೆಪ್ಟೆಂಬರ್ 08, 2026ರಂದು ಬರ್ಕೆ ಪೊಲೀಸ್ ಠಾಣೆಯಲ್ಲಿ (ಅ.ಕ್ರ. 82/2026, ಕಲಂ 323 ಬಿಎನ್‌ಎಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆ ಅಡಿಯಲ್ಲಿ) ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಜೈಲಿಗೆ ದಾಳಿ ನಡೆಸಿ ತಪಾಸಣೆ ಕೈಗೊಂಡಾಗ, ಎ-ಬ್ಲಾಕ್‌ನಲ್ಲಿ ಬಂಧನದಲ್ಲಿದ್ದ 9 ಮಂದಿ ಕೈದಿಗಳು ಅಕ್ರಮವಾಗಿ ಬಚ್ಚಿಟ್ಟುಕೊಂಡಿದ್ದ 10 ಸ್ಮಾರ್ಟ್‌ಫೋನ್‌ಗಳು ಪತ್ತೆಯಾಗಿವೆ.

ಪ್ರಮುಖ ಆರೋಪಿಗಳು ಮತ್ತು ಪ್ರಕರಣಗಳ ವಿವರ: ವಶಪಡಿಸಿಕೊಳ್ಳಲಾದ ಮೊಬೈಲ್ಸ್‌ಗಳ ಬಳಿಕ ಜೈಲಿನಲ್ಲಿರುವ ಪ್ರಮುಖ ಅಪರಾಧಿಗಳ ನಂಟು ಬಹಿರಂಗಗೊಂಡಿದೆ:

ಅರೀಫ್ ಕೊಲೆ ಪ್ರಕರಣದ ಆರೋಪಿಗಳು: ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್ ಮತ್ತು ಅರ್ಷದ್ (ಇವರು ಇತ್ತೀಚೆಗೆ ತೊಕ್ಕೊಟ್ಟು ಬಳಿ ನಡೆದ ಕೊಲೆ ಪ್ರಕರಣದವರಾಗಿದ್ದಾರೆ).

ಡ್ರಗ್ಸ್ ಪ್ರಕರಣದ ಆರೋಪಿಗಳು: ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್ ಮತ್ತು ಅಬ್ದುಲ್ ಸಾದೀಕ್ (ಎನ್.ಡಿ.ಪಿ.ಎಸ್ ಮಾದಕ ವಸ್ತು ಮಾರಾಟ ಪ್ರಕರಣದ ಆರೋಪಿಗಳು).

ಕೋಕಾ (KCOCA) ಪ್ರಕರಣದ ಆರೋಪಿ: ಕಂಕನಾಡಿ ನಗರ ಠಾಣೆ ಪ್ರಕರಣದ ಆರೋಪಿಯಾದ ಅರ್ಫಜ್.

ಜೈಲಿಗೆ ಮೊಬೈಲ್ ಪೂರೈಕೆ ಮಾಡಿದ್ದು ಯಾರು ಮತ್ತು ಅವುಗಳ ಬಳಕೆಯ ಹಿಂದಿನ ಜಾಲದ ಕುರಿತು ಬರ್ಕೆ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!