BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

Pramod Muthalik ದಸರಾ ರಜೆ ಕಡಿತ ಮಾಡಿದ್ರೆ ಶಾಲೆಗಳ ವಿರುದ್ಧ ಪ್ರತಿಭಟನೆ; ಪ್ರಮೋದ್ ಮುತಾಲಿಕ್ ಎಚ್ಚರಿಕೆ


ಮಂಗಳೂರು,ಸೆ 28: ಈ ಬಾರಿ ಸರ್ಕಾರ ನೀಡಿದ ದಸರಾ ರಜೆ ಕಡಿತ ಮಾಡಿದ್ರೆ ಶಾಲೆಗಳ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಶ್ರೀರಾಮ ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.  ಕ್ರಿಶ್ಚಿಯನ್ ಶಾಲೆಗಳಲ್ಲಿ ಶೇ. 99ರಷ್ಟು ಹಿಂದೂ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದರೂ, ದಸರಾ ಹಬ್ಬದ ರಜೆಯನ್ನು ಕಡಿತಗೊಳಿಸಿರುವುದು ಅನ್ಯಾಯ ಮತ್ತು ಧರ್ಮದ್ರೋಹದ ಸಿದ್ಧಾಂತ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಸರಾ ನಮ್ಮ ಅತ್ಯಂತ ಸಾಂಸ್ಕೃತಿಕ ಹಾಗೂ ಸಾಂಪ್ರದಾಯಿಕ ಹಬ್ಬ. ಆದರೆ ಕ್ರಿಶ್ಚಿಯನ್ ಶಾಲೆಗಳಲ್ಲಿ ದಸರಾ ರಜೆಯನ್ನು ಕೇವಲ ಒಂದೆರಡು ದಿನಕ್ಕೆ ಸೀಮಿತಗೊಳಿಸಿ, ಕ್ರಿಸ್ಮಸ್ ಹಬ್ಬಕ್ಕೆ ಮಾತ್ರ ಹತ್ತು ದಿನಗಳಿಗೂ ಅಧಿಕ ಕಾಲ ರಜೆ ನೀಡುವ ಮೂಲಕ ಹಿಂದೂ ವಿದ್ಯಾರ್ಥಿಗಳಿಗೆ ಮತ್ತು ಸಂಸ್ಕೃತಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.  ಕ್ರಿಶ್ಚಿಯನ್ ಶಾಲೆಗಳಲ್ಲಿ ಶೇ. 99ರಷ್ಟು ಹಿಂದೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರೇ ಇದ್ದರೂ ಹಿಂದೂ ಹಬ್ಬಗಳಿಗೆ ಸರಿಯಾಗಿ ರಜೆ ನೀಡುತ್ತಿಲ್ಲ.   ದಸರಾ ಹಬ್ಬದ ರಜೆಯನ್ನು ಕಡಿತಗೊಳಿಸಿರುವುದು ಹಾಗೂ ಕ್ರಿಸ್ಮಸ್ ಹಬ್ಬಕ್ಕೆ 10 ದಿನಗಳ ರಜೆ ನೀಡುವುದು ವ್ಯವಸ್ಥಿತವಾಗಿ ಹಿಂದೂ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುವ ಮಾನಸಿಕ ಹಾಗೂ ಸಾಂಸ್ಕೃತಿಕ ಮತಾಂತರದ ಪ್ರಕ್ರಿಯೆಯಾಗಿದೆ.   ಈ ಧೋರಣೆಯನ್ನು ಮುಂದುವರಿಸಿದರೆ ರಾಜ್ಯಾದ್ಯಂತ ಎಲ್ಲಾ ಕ್ರಿಶ್ಚಿಯನ್ ಶಾಲೆಗಳ ಎದುರು ಧರಣಿ ನಡೆಸಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.   ಈ ಕುರಿತು ಕೂಡಲೇ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.   

https://youtube.com/shorts/1UxSM__BPAQ



 

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!