ಪುತ್ತೂರು, ಸೆಪ್ಟೆಂಬರ್ 03 : ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್‌ಗೆ ಆಗಮಿಸಿದ್ದ ರಾಜಕೀಯ ಪಕ್ಷವೊಂದರ ಕಾರ್ಯಕರ್ತ ಅಬ್ದುಲ್ ಹಕೀಂ ಕೂರ್ನಡ್ಕ ಅವರ ಮೇಲೆ ಹಲ್ಲೆಗೆ ಯತ್ನಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪದಡಿ ಒಂಬತ್ತು ಮಂದಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಮ್ಮಿಂಜೆ ಗ್ರಾಮದ ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ನೀಡಿದ ದೂರಿನ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ತಮ್ಮ ವಿರುದ್ಧ ಮಾಡಲಾದ ಕೆಲವು ಆರೋಪಗಳಿಗೆ ಸ್ಪಷ್ಟನೆ ನೀಡಲು ಸೆ.1ರಂದು ಮಧ್ಯಾಹ್ನ ಪ್ರೆಸ್ ಕ್ಲಬ್‌ಗೆ ಬಂದಿದ್ದ ವೇಳೆ, ಉದಯ ಪಾಟಾಳಿ, ಜುನೈದ್ ಬಿಜಿ, ಇಸಾಕ್ ಸಾಲ್ಮರ, ಬಶೀರ್ ಪರ್ಲಡ್ಕ, ಹಕೀಂ ಬೋಳ್ವಾರು, ಮೋನು ಬಪ್ಪಳಿಗೆ, ನಾಶಿರ್ ಕೊಲ್ಪೆ, ಪ್ರವೀಣ್ ಆಚಾರ್ಯ ಸೇರಿದಂತೆ ಇತರರು ತಮ್ಮನ್ನು ತಳ್ಳಿ, ಪ್ರೆಸ್ ಕ್ಲಬ್‌ನೊಳಗೆ ತೆರಳದಂತೆ ಅಕ್ರಮವಾಗಿ ತಡೆದು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಯ ತಳ್ಳಾಟದಿಂದ ನೋವುಂಟಾದ ಹಿನ್ನೆಲೆಯಲ್ಲಿ ಅಬ್ದುಲ್ ಹಕೀಂ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.