ಪುತ್ತೂರು, ಸೆಪ್ಟೆಂಬರ್ 09 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯಕ್ಕೆ ಅತಿಕ್ರಮ ಪ್ರವೇಶಿಸಿ, ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ಕೊಳ್ತಿಗೆ ನಿವಾಸಿ ಕೆ. ರಾಮಚಂದ್ರ (35) ಬಂಧಿತ ಆರೋಪಿ. ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದ ಮೇಲ್ವಿಚಾರಕರು ಸೆಪ್ಟೆಂಬರ್ 2ರಂದು ಬೆಳಿಗ್ಗೆ ವಿದ್ಯಾರ್ಥಿನಿಯರ ಬಟ್ಟೆಗಳು ಕಾಣೆಯಾಗಿರುವುದನ್ನು ಗಮನಿಸಿ, ಈ ಬಗ್ಗೆ ಮೇಲ್ವಿಚಾರಕರಿಗೆ ವಿದ್ಯಾರ್ಥಿನಿಯರು ಮಾಹಿತಿ ನೀಡಿದ್ದರು.
ನಂತರ ವಿದ್ಯಾರ್ಥಿನಿಲಯದ ಸಿಸಿಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಅಂದು ಬೆಳಗಿನ ಜಾವ ಅಪರಿಚಿತ ವ್ಯಕ್ತಿಯೊಬ್ಬ ಅತಿಕ್ರಮ ಪ್ರವೇಶಿಸಿ ಬಟ್ಟೆಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿತ್ತು.
ಈ ಕುರಿತು ಸೆಪ್ಟೆಂಬರ್ 5ರಂದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಸೆಪ್ಟೆಂಬರ್ 7ರಂದು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ 6 ಗ್ರಾಮ ಪಂಚಾಯತ್‌ಗಳ ಮೇಲೆ ಲೋಕಾಯುಕ್ತರ ದಿಢೀರ್ ದಾಳಿ