BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

RSS ಪಥಸಂಚಲನದಲ್ಲಿ ಭಾಗವಹಿಸಿದ ಪ್ರಕರಣ,ಇಬ್ಬರು ಶಿಕ್ಷಕರ ಅಮಾನತಿಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ(KAT) ಯಿಂದ ತಡೆ.!

ಕಲಬುರಗಿ, ಸೆಪ್ಟೆಂಬರ್ 05 :   ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ದ ಪಥಸಂಚಲನದಲ್ಲಿ ಭಾಗವಹಿಸಿದ ಆರೋಪದ ಮೇಲೆ ಸರಕಾರಿ ಪ್ರಾಥಮಿಕ ಶಾಲೆಯ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿದ್ದ ಆದೇಶಕ್ಕೆ ಕಲಬುರ್ಗಿಯ ‘ಕರ್ನಾಟಕ ಆಡಳಿತ ನ್ಯಾಯಮಂಡಳಿ’ಯು ತಡೆ ನೀಡಿದೆ.ಅಕ್ಟೋಬರ 10, 2025 ರಂದು ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದಲ್ಲಿ ಜಿಲ್ಲೆಯ ಹುಣಸಗಿ ಪಟ್ಟಣದ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಶಿಕ್ಷಕ ಅಣ್ಣಾಸಾಹೇಬ ದೇಶಮುಖ ಸಮವಸ್ತ್ರ ಧರಿಸಿ ಭಾಗವಹಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಚನ್ನಬಸವಪ್ಪಾ ಮುಧೋಳ ಅವರು ಆಗಸ್ಟ 20 ರಂದು ಇಬ್ಬರೂ ಶಿಕ್ಷಕರನ್ನು ಅಮಾನತುಗೊಳಿಸಿದ್ದರು.ಅಮಾನತು ಆದೇಶವನ್ನು ಪ್ರಶ್ನಿಸಿ ಇಬ್ಬರೂ ಶಿಕ್ಷಕರು ಕರ್ನಾಟಕ ಆಡಳಿತ ನ್ಯಾಯಮಂಡಳಿಯ ಕಲಬುರ್ಗಿ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಪೀಠವು ಅಮಾನತು ಆದೇಶಕ್ಕೆ ತಡೆ ನೀಡಿದೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!