BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

SDPI Mangaluru ಮಂಗಳೂರು ಬಾಲ್ಕನಿ ಕುಸಿತ ದುರಂತ: ಮೃತ ವಿದ್ಯಾರ್ಥಿಯ ಮನೆಗೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ, ಕುಟುಂಬಕ್ಕೆ ಸಾಂತ್ವನ



ಮಂಗಳೂರು, ಸೆ 29 : ಮಂಗಳೂರಿನ ರಾಮ ಲಕ್ಷ್ಮೀ ನಾರಾಯಣ  ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಬಾಲ್ಕನಿ ಕುಸಿತದ ದುರಂತದಲ್ಲಿ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ಮೃತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತ ವಿದ್ಯಾರ್ಥಿಯ ಕುಟುಂಬದ ದುಃಖದಲ್ಲಿ ಭಾಗಿಯಾದ ಅವರು, ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದ ಪ್ರತಿಭಾವಂತ ವಿದ್ಯಾರ್ಥಿಯೊಬ್ಬರು ಇಂತಹ ದುರಂತದಲ್ಲಿ ಪ್ರಾಣ ಕಳೆದುಕೊಂಡಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು SDPI ನಾಯಕರು ಕಳವಳ ವ್ಯಕ್ತಪಡಿಸಿದರು.

ಈ ದುರ್ಘಟನೆಯಿಂದ ನೊಂದಿರುವ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಸ್ಪಂದಿಸಬೇಕು. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ರೂ.50 ಲಕ್ಷ ಪರಿಹಾರ ನೀಡಬೇಕು ಹಾಗೂ ಗಾಯಗೊಂಡಿರುವ ಎಲ್ಲಾ ವಿದ್ಯಾರ್ಥಿಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು SDPI ಆಗ್ರಹಿಸಿದೆ.

ದುರ್ಘಟನೆಗೆ ಕಾರಣವಾದ ಅಂಶಗಳ ಕುರಿತು ಸಮಗ್ರ ತನಿಖೆ ನಡೆಸಿ, ಕಟ್ಟಡದ ಸುರಕ್ಷತಾ ವ್ಯವಸ್ಥೆ ಹಾಗೂ ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ನಗರದಲ್ಲಿರುವ ಹಳೆಯ ಹಾಗೂ ಶಿಥಿಲಗೊಂಡ ಕಟ್ಟಡಗಳನ್ನು ಗುರುತಿಸಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಕಟ್ಟಡಗಳ ಪರವಾನಗಿ ನವೀಕರಣ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಸ್ಥಳ ಪರಿಶೀಲನೆ ನಡೆಸಿ, ಸುರಕ್ಷತಾ ಮಾನದಂಡಗಳನ್ನು ಖಚಿತಪಡಿಸಿಕೊಳ್ಳಬೇಕು ಎಂದು SDPI ನಾಯಕರು ಆಗ್ರಹಿಸಿದರು.

ಈ ಸಂದರ್ಭದಲ್ಲಿ SDPI ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ, ಮಂಗಳೂರು ನಗರ ಜಿಲ್ಲಾ ಅಧ್ಯಕ್ಷರಾದ ಅಶ್ರಫ್ ಅಡ್ಡೂರು,ಮಂಗಳೂರು ಗ್ರಾಮಾಂತರ ಜಿಲ್ಲಾದ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು ಹಾಗೂ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ   ಉಪಸ್ಥಿತರಿದ್ದರು.



📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!