BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

SDPI Mangaluru ಮಂಗಳೂರು ದುರ್ಘಟನೆ: ವಿದ್ಯಾರ್ಥಿಯ ಮರಣಕ್ಕೆ ಯೆಂಗ್ ಡೆಮಾಕ್ರಟ್ಸ್ ಕರ್ನಾಟಕ ತೀವ್ರ ಸಂತಾಪ


ಮಂಗಳೂರು, ಸೆ 27 :  ಮಂಗಳೂರಿನ ರಾಮ ಲಕ್ಷ್ಮಿನಾರಾಯಣ ಕನ್ವೆನ್ಷನ್ ಹಾಲಿನಲ್ಲಿ ನಡೆದ ಅತ್ಯಂತ ದುರದೃಷ್ಟಕರ ಮತ್ತು ಆಘಾತಕಾರಿ ಮೇಲ್ಮಹಡಿ (ಬಾಲ್ಕನಿ) ಕುಸಿತ ದುರ್ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿರುವ ಹಾಗೂ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆಗೆ ಯೆಂಗ್ ಡೆಮಾಕ್ರಟ್ಸ್ ತೀವ್ರ ಅಘಾತ ಮತ್ತು ಸಂತಾಪ ವ್ಯಕ್ತಪಡಿಸಿದೆ. 

 ನಗರದ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಾಯಗೊಂಡಿದ್ದ ಸೇಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶಮ್ಮಾಝ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

 ಕನ್ವೀನರ್ ತನ್ವೀರ್ ಉಳ್ಳಾಲ ,ಯೆಂಗ್ ಡೆಮಾಕ್ರಟ್ಸ್ 

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ  ಯೆಂಗ್ ಡೆಮಾಕ್ರಟ್ಸ್ ಮಂಗಳೂರು ನಗರ , ಜಿಲ್ಲಾ ಜಾಯಿಂಟ್ ಕನ್ವೀನರ್ ತನ್ವೀರ್ ಉಳ್ಳಾಲ ಅವರು ಮಂಗಳೂರಿನ ರಾಮ ಲಕ್ಷ್ಮಿನಾರಾಯಣ ಕನ್ವೆನ್ಷನ್ ಹಾಲಿನಲ್ಲಿ ನಡೆದ ಅತ್ಯಂತ ದುರದೃಷ್ಟಕರ ಮತ್ತು ಆಘಾತಕಾರಿ ಮೇಲ್ಮಹಡಿ (ಬಾಲ್ಕನಿ) ಕುಸಿತ ದುರ್ಘಟನೆಯಲ್ಲಿ ಒಬ್ಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿರುವ ಹಾಗೂ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ತಿಳಿದು ತೀವ್ರ ನೋವು ಹಾಗೂ ಆಘಾತವಾಗಿದೆ. ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭಕ್ಕೆ ಅತ್ಯುತ್ಸಾಹದಿಂದ ಬಂದಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ಪ್ರತಿಭಾವಂತ ವಿದ್ಯಾರ್ಥಿ ಈ ಅನಿರೀಕ್ಷಿತ ದುರಂತಕ್ಕೆ ಬಲಿಯಾಗಿರುವುದು ಮತ್ತು ಇತರ ಕೆಲವರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಅಗಲಿಕೆಯಿಂದ ದುಃಖದಲ್ಲಿರುವ ಕುಟುಂಬವರ್ಗ, ಸ್ನೇಹಿತರು ಹಾಗೂ ವಿದ್ಯಾರ್ಥಿ ಬಂಧುಗಳ ನೋವಿನಲ್ಲಿ ಯಂಗ್ ಡೆಮಾಕ್ರಟ್ಸ್ ಭಾಗಿಯಾಗುತ್ತದೆ.ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಸೃಷ್ಟಿಕರ್ತನು ನೀಡಲಿ  ಹಾಗೂ ಗಾಯಗೊಂಡಿರುವ ವಿದ್ಯಾರ್ಥಿಗಳು ಶೀಘ್ರವಾಗಿ ಗುಣಮುಖರಾಗಲಿ ಎಂದಿದ್ದಾರೆ. 

ಸರ್ವ ಕಾಲೇಜು ಚುನಾವಣೆ ಹಾಗೂ ಪದಗ್ರಹಣ ಸಮಾರಂಭದಲ್ಲಿ ಅವಘಡ , ಬಾಲ್ಕನಿ ತಡೆಗೋಡೆ ಕುಸಿದು ಓರ್ವ ವಿದ್ಯಾರ್ಥಿ ಮೃತ್ಯು, ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ



📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!