BREAKING
[ಹೋಮ್] ರಾಜ್ಯ
[ಹೋಮ್] ದೇಶ
[ಹೋಮ್] ವಿದೇಶ
[ಹೋಮ್] ಕ್ರೀಡೆ
[ಹೋಮ್] ಸಿನಿಮಾ
[ಹೋಮ್] ಉಡುಪಿ
[ಹೋಮ್] ದಕ್ಷಿಣ ಕನ್ನಡ
ರಾಜ್ಯ

Shimogga ಶಿವಮೊಗ್ಗ: ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ - 35 ಕೆ.ಜಿ ಮಾಂಸ ವಶಕ್ಕೆ


ಶಿವಮೊಗ್ಗ, ಸೆಪ್ಟೆಂಬರ್ 12 : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಅರಣ್ಯ ಸಂಚಾರಿ ದಳದ ಪೊಲೀಸರು ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಯಶಸ್ವಿಯಾಗಿ ಬೇಧಿಸಿದ್ದು, ಅಕ್ರಮವಾಗಿ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಬಳಿ ಈ ಅಕ್ರಮ ಕೃತ್ಯ ನಡೆಯುತ್ತಿತ್ತು. ನೆವಟೂರು ಆನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ ಎಂದು ಬಂಧಿತರನ್ನು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ವಿನಾಯಕ ಕೆ. ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಬರೋಬ್ಬರಿ 35 ಕೆ.ಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.

 ವನ್ಯಜೀವಿಗಳ ಬೇಟೆ ಹಾಗೂ ಅಕ್ರಮ ಮಾಂಸ ಮಾರಾಟದ ವಿರುದ್ಧ ಅರಣ್ಯ ಸಂಚಾರಿ ದಳದ ಕಾರ್ಯಾಚರಣೆ ಮುಂದುವರಿದಿದ್ದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

📢 ಸುದ್ದಿವಾಣಿ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!